ಧರ್ಮಸ್ಥಳದ ಪವಿತ್ರ ಸಾನ್ನಿಧ್ಯದಲ್ಲಿ ದೇಲಂಪಾಡಿ ಕ್ಷೇತ್ರ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆಯ ಭವ್ಯ ಬಿಡುಗಡೆ!

  • 17 Mar 2025 03:35:28 PM

ಪುತ್ತಿಗೆ: ಅಂಗಡಿಮೊಗರು ಸಮೀಪದ ದೇಲಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವವು ಮೇ 6 ರಿಂದ 12 ರ ತನಕ ವಿಜೃಂಭಣೆಯಿಂದ ನಡೆಯಲಿದೆ. ಈ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ. ಡಿ.ವಿರೇಂದ್ರ ಹೆಗ್ಗಡೆ ಅವರು ಭಾನುವಾರ ಧರ್ಮಸ್ಥಳದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಬಿಡುಗಡೆಗೊಳಿಸಿದರು. 

 

ಈ ಸಂದರ್ಭದಲ್ಲಿ ಅವರು ದೇಲಂಪಾಡಿ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನೂ ಆರಾಧನ ಸಂಪ್ರದಾಯವನ್ನು ಶ್ಲಾಘಿಸಿದರು. ಹಾಗೆಯೇ ಬ್ರಹ್ಮಕಲಶೋತ್ಸವವು ಯಶಸ್ವಿಯಾಗಿ ನೆರವೇರಲಿ ಎಂದು ಶುಭ ಹಾರೈಸಿ ಆಶೀರ್ವಚಿಸಿದರು.

 

ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಡಿ.ದಾಮೋದರನ್, ಉಪಾಧ್ಯಕ್ಷ ಡಿ.ಎನ್. ರಾಧಾಕೃಷ್ಣ, ಸೇವಾ ಸಮಿತಿ ಕಾರ್ಯದರ್ಶಿ ಕೇಶವ ಮಾಸ್ತರ್, ಸಮಿತಿ ಪದಾಧಿಕಾರಿಗಳಾದ ಭಾಸ್ಕರನ್ ಡಿ.ಕೆ, ರತ್ನಾಕರ ಶೆಟ್ಟಿ ಮತ್ತು ಮತ್ತಿತರ ಗಣ್ಯರು ಈ ಸಂದರ್ಭಡಾಲ್ಲಿ ಉಪಸ್ಥಿತರಿದ್ದರು.