ಸುಳ್ಯ: ವಿಶ್ವ ಹಿಂದೂ ಪರಿಷತ್, ಬಜರಂಗದಳ, ಮಾತೃಶಕ್ತಿ ದುರ್ಗವಾಹಿನಿ ಮತ್ತು ಉತ್ಸವ ಸಮಿತಿ ಸಹಯೋಗದ 12ನೇ ವರ್ಷದ ಮೊಸರುಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಇಂದು ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ವಿಜೃಂಭಣೆಯಿಂದ ನಡೆಯಿತು.
ಈ ವರ್ಷದ ಮೊಸರುಕುಡಿಕೆ ಉತ್ಸವವನ್ನು ಭವ್ಯವಾಗಿ ಆಚರಿಸಲು ಸಕಲ ಸಿದ್ಧತೆಗಳನ್ನು ಆರಂಭಿಸಲಾಗಿದ್ದು, ಆಮಂತ್ರಣ ಪತ್ರಿಕೆ ಬಿಡುಗಡೆ ಮೂಲಕ ಉತ್ಸವದ ಶುಭಾರಂಭವಾಗಿದೆ.
ಈ ಸಂದರ್ಭದಲ್ಲಿ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸ್ಥಳೀಯ ಗಣ್ಯರು ಉಪಸ್ಥಿತರಿದ್ದರು.