ಉಡುಪಿ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ, ಹಿಂದೂ ಹಿತ ರಕ್ಷಣಾ ಸಮಿತಿ ಉಡುಪಿ ಜಿಲ್ಲಾ ಘಟಕವು 2024 ಡಿಸೆಂಬರ್ 4, ಬುಧವಾರ ದಂದು ಮಧ್ಯಾಹ್ನ 3 ಗಂಟೆಗೆ ಜೋಡುಕಟ್ಟೆಯಿಂದ ಕೃಷ್ಣ ಮಠ ಪಾರ್ಕಿಂಗ್ ವರೆಗೆ ಪ್ರತಿಭಟನಾ ಸಭೆ ಮತ್ತು ಮೆರವಣಿಗೆಯನ್ನು ಆಯೋಜಿಸಿದೆ.
ಈ ಪ್ರತಿಭಟನಾ ಕಾರ್ಯಕ್ರಮ ಹಾಗೂ ಮೆರವಣಿಗೆಯನ್ನು ಯಶಸ್ವಿಗೊಳಿಸಲು ಎಲ್ಲರೂ ಭಾಗವಹಿಸುವಂತೆ ಆಯೋಜಕರು ಮನವಿ ಮಾಡಿಕೊಂಡಿದ್ದಾರೆ.