ಪುತ್ತೂರು ವಿವೇಕಾನಂದ ಕಾನೂನು ಕಾಲೇಜಿನಲ್ಲಿ ಎಬಿವಿಪಿ ವತಿಯಿಂದ ಸಾಮಾಜಿಕ ಸಾಮರಸ್ಯ ದಿವಸ್ ಆಚರಣೆ!

  • 07 Dec 2024 05:27:44 PM

ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ, ಡಿಸೆಂಬರ್ 6, 2024 ರಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ವತಿಯಿಂದ ಅಂಬೇಡ್ಕರ್ ತಿಥಿ ಸಾಮಾಜಿಕ ಸಾಮರಸ್ಯ ದಿವಸ್‌ ಆಗಿ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾದ ಹಿಂದೂ ಜಾಗರಣ ವೇದಿಕೆಯ ದಕ್ಷಿಣ ಪ್ರಾಂತ ಮಾತೃ ಸುರಕ್ಷಾ ಪ್ರಮುಖ್ ಶ್ರೀ ಗಣರಾಜ್ ಭಟ್ ಕೆದಿಲರವರು *ಅಂಬೇಡ್ಕರ್ ಕಂಡ ಕನಸಿನ ಭಾರತ* ಎಂಬ ವಿಷಯದ ಕುರಿತು ಅತಿಥಿ ಉಪನ್ಯಾಸವನ್ನು ನೀಡಿದರು.

 

ಕಾರ್ಯಕ್ರಮದಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲೆ ಶ್ರೀಮತಿ ಅಕ್ಷತಾ ಎ.ಪಿ ಸಭಾ ಅಧ್ಯಕ್ಷ ಸ್ಥಾನವನ್ನು ವಹಿಸಿದರು. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಂಯೋಜಕ ಶ್ರೀ ಲಕ್ಷ್ಮಿಕಾಂತ್ ರೈ ಹಾಗೂ ಕಾಲೇಜಿನ ವಿದ್ಯಾರ್ಥಿ ಪರಿಷತ್ತಿನ ಕಾರ್ಯದರ್ಶಿ ಶ್ರೀ ಪ್ರದೀಪ್, ಮತ್ತು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಅಧ್ಯಕ್ಷ ಅಭಿಷೇಕ್ ಗೌರವವಾಗಿ ಉಪಸ್ಥಿತರಿದ್ದರು.

 

ಈ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ಸಾಮಾಜಿಕ ಸಮಾನತೆ ಮತ್ತು ಸಾಮರಸ್ಯದ ಮಹತ್ವವನ್ನು ತಿಳಿಸುವ ಉದ್ದೇಶದಿಂದ ಆಯೋಜಿಸಲಾಯಿತು. ಜೊತೆಗೆ ಅಂಬೇಡ್ಕರ್ ಅವರ ಸಮಾಜದಲ್ಲಿನ ಸಮಾನತೆಯ ತತ್ವಗಳನ್ನು ಪ್ರತಿಪಾದಿಸುವುದರ ಮೂಲಕ ವಿದ್ಯಾರ್ಥಿಗಳಿಗೆ ಈ ಕಾರ್ಯಕ್ರಮವು ಪ್ರೇರಣದಾಯಕವಾಗಿ ಪರಿಣಮಿಸಿತು