ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ *ಜ್ಞಾನ ದೀಪ* ಕಾರ್ಯಕ್ರಮದಡಿ ಬೆಳ್ತಂಗಡಿ ತಾಲೂಕಿನ ತಿಮ್ಮಣಬೆಟ್ಟು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಗೆ 10 ಡೆಸ್ಕ್ ಮತ್ತು ಬೆಂಚ್‌ಗಳನ್ನು ಕೊಡುಗೆಯಾಗಿ ನೀಡಲಾಯಿತು.
ಶಾಲಾ ಸಭಾಂಗಣದಲ್ಲಿ ನಡೆದ ಹಸ್ತಾಂತರ ಕಾರ್ಯಕ್ರಮದಲ್ಲಿ ಗ್ರಾಮ ಸಮಿತಿಯ ಅಧ್ಯಕ್ಷ ರಾಮದಾಸ್ ನಾಯಕ್, ವಲಯ ಮೇಲ್ವಿಚಾರಕಿ ಶಾಲಿನಿ, ಒಕ್ಕೂಟದ ಪದಾಧಿಕಾರಿಗಳು, ಶಾಲಾ ಮುಖ್ಯೋಪಾಧ್ಯಾಯ ಸಚಿನ್ ಮತ್ತು ಶಿಕ್ಷಕ ವೃಂದದವರು ಭಾಗವಹಿಸಿದ್ದರು.
ಈ ಸಹಾಯದಿಂದ ಶಾಲೆಯ ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ಸೌಕರ್ಯಗಳು ದೊರಕಿತು. ಇದು ವಿದ್ಯಾರ್ಥಿಗಳ ಕಲಿಕೆ ಪ್ರೋತ್ಸಾಹ ನೀಡುತ್ತದೆ ಎಂದು ಶಾಲಾ ಆಡಳಿತವು ಧರ್ಮಸ್ಥಳದ ಯೋಜನೆಗೆ ಕೃತಜ್ಞತೆ ಸಲ್ಲಿಸಿದರು.