*ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಧರ್ಮಸಂಗಮದ ಕಾರ್ಯಲಯ ಉದ್ಘಾಟನೆ!* *ಕಳೆದ ಬಾರಿಗಿಂತಲೂ ಅದ್ದೂರಿಯಾಗಿ ನಡೆಯಲಿದೆ ಶ್ರೀನಿವಾಸ ಕಲ್ಯಾಣೋತ್ಸವ- ಕೇಶವಪ್ರಸಾದ್ ಮುಳಿಯ* *ಹಿಂದೂಗಳ ಮೇಲಾಗುತ್ತಿರುವ ದಬ್ಬಾಳಿಕೆಗೆ ಒಗ್ಗಟ್ಟೊಂದೇ ಪರಿಹಾರ : ಡಾ.ಸುರೇಶ್ ಪುತ್ತೂರಾಯ*

  • 16 Dec 2024 09:13:07 AM

ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಇದರ ನೇತೃತ್ವದಲ್ಲಿ ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಡಿ.28 ,29 ರಂದು ಜರಗುವ ದ್ವಿತೀಯ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಧರ್ಮಸಂಗಮ ಕಾರ್ಯಕ್ರಮದ ಕಾರ್ಯಲಯ ಉದ್ಘಾಟನಾ ಸಮಾರಂಭವು ಡಿ.15 ರಂದು ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ನಡೆಯಿತು.

 

ದೀಪಪ್ರಜ್ವಲನೆ ನೆರವೇರಿಸಿ ಮಾತನಾಡಿದ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷರಾದ ಕೇಶವ ಪ್ರಸಾದ್ ಮುಳಿಯ ಅವರು ಪ್ರಥಮ ವರ್ಷ ಅದ್ದೂರಿಯಾಗಿ ನಡೆದ ಈ ಶ್ರೀನಿವಾಸ ಕಲ್ಯಾಣೋತ್ಸವವು ಈ ಭಾರಿ ಅದಕ್ಕಿಂತ ಅದ್ದೂರಿಯಾಗಿ ನಡೆಯುವುದರಲ್ಲಿ ಯಾವೂದೇ ಸಂದೇಹವಿಲ್ಲ ಎಂದು ಹೇಳಿದರು.

 

ಹಿಂದೂಗಳ ಒಳಿತಿಗಾಗಿ ನಡೆಯುವ ಕಲ್ಯಾಣೋತ್ಸವದಲ್ಲಿ ಯಾವುದೇ ವೈಮನಸ್ಸಿಲ್ಲದೆ ಎಲ್ಲರೂ ಒಗ್ಗಟ್ಟಿನಿಂದ ಭಾಗವಹಿಸಬೇಕು ಎಂದೂ ಧರ್ಮ ಸಂರಕ್ಷಣೆಗಾಗಿ ಈ ಅದ್ದೂರಿ ಕಾರ್ಯಕ್ರಮದ ರೂವಾರಿಯಾದವ್ ಅರುಣ್ ಪುತ್ತಿಲರಿಗೆ ಧನ್ಯವಾದಗಳು ಎಂದು ಹೇಳಿದರು.

 

 

ಗೌರವಾಧ್ಯಕ್ಷರಾದ ಡಾ.ಸುರೇಶ್ ಪುತ್ತೂರಾಯ ಅವರು ಮಾತನಾಡಿ, ಈ ಬಾರಿ ನಾವೆಲ್ಲ ಒಂದಾಗಿದ್ದೇವೆ. ಹಿಂದೂ ಧರ್ಮಕ್ಕೆ ಆಗುತ್ತಿರುವ ಅನ್ಯಾಯಕ್ಕೆ ನಮ್ಮ ಒಗ್ಗಟ್ಟೊಂದೇ ಪರಿಹಾರವಾಗಲು ಸಾಧ್ಯ. ಇಂತಹ ಧಾರ್ಮಿಕ ಕಾರ್ಯಕ್ರಮದಿಂದ ನಾವೆಲ್ಲ ಒಂದು ಎನ್ನುವುದನ್ನು ಸಾರಬಹುದು ಎಂದು ಹೇಳಿದರು.

 

ಎರಡನೇ ವರ್ಷದ ಅದ್ದೂರಿ ಶ್ರೀನಿವಾಸ ಕಲ್ಯಾಣೋತ್ಸವದ ಎರಡೂ ದಿನದ ಕಾರ್ಯಕ್ರಮಕ್ಕೆ ಎಲ್ಲಾ ಹಿಂದೂ ಬಾಂಧವರು ಭಾಗವಹಿಸಬೇಕು ಎಂದು ಹೇಳಿದರು.

 

ಪ್ರಾಸ್ತಾವಿಕ ಮಾತನಾಡಿದ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಸಂಚಾಲಕರಾದ ಅರುಣ್ ಕುಮಾರ್ ಪುತ್ತಿಲ, ಶ್ರೀನಿವಾಸ ಕಲ್ಯಾಣೋತ್ಸವದ ಆಮಂತ್ರಣ ಪ್ರತಿ ಹಿಂದೂಗಳ ಮನೆಗೆ ತಲುಪಲಿದೆ. ಎರಡು ದಿನದ ಕಾರ್ಯಕ್ರಮವನ್ನು ನಮ್ಮದೇ ಕಾರ್ಯಕ್ರಮವೆಂಬಂತೆ ಎಲ್ಲಾ ಹಿಂದೂ ಬಾಂದವರು ಪಾಲ್ಗೊಂಡು ದೇವರ ಪ್ರೀತಿಗೆ ಪಾತ್ರರಾಗಬೇಕೆಂದು ಕೇಳಿಕೊಂಡರು. ಹಾಗೆಯೇ ಪ್ರತಿ ಮನೆಗಳಿಂದಲೂ ಹೊರಕಾಣಿಕೆ ಸಮರ್ಪಣೆ ಮಾಡ ಬೇಕೆಂದು ಅವರು ಹೇಳಿದರು.

 

ದೇವಳದ ಅರ್ಚಕರಾದ ವಿ.ಎಸ್ ಭಟ್ ದೀಪಪ್ರಜ್ವಲನೆಗೊಳಿಸಿ ಶುಭಹಾರೈಸಿದರು.

 

ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಉದ್ಯಮಿ ಶಶಾಂಕ್ ಕೊಟೇಚಾ, ಹಾಗೂ ನಿವೃತ್ತ ಸೇನಾಧಿಕಾರಿ ಚಂದಪ್ಪ ಮೂಲ್ಯ, ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಅಧ್ಯಕ್ಷರಾದ ಮಹೇಂದ್ರ ವರ್ಮ ಬಜತ್ತೂರು, ಸ್ವಾಗತ ಸಮಿತಿ ಸಂಚಾಲಕರಾದ ಅನಿಲ್ ತೆಂಕಿಲ, ಅಧ್ಯಕ್ಷರಾದ ರಾಜು ಶೆಟ್ಟಿ, ಲಕ್ಷ್ಮಣ ಸಂಪ್ಯ, ಮಹಿಳಾ ಘಟಕದ ಸಂಚಾಲಕರಾದ ರಜತಾ ಗಿರೀಶ್ ಭಟ್, ಸಹಸಂಚಾಲಕಿ ಪುಷ್ಪಾ ರಾಜೇಶ್, ಹರಿಣಿ ಪುತ್ತೂರಾಯ, ಮಲ್ಲಿಕಾ ಪ್ರಸಾದ್, ಕಡಬ ಘಟಕದ ಕಾರ್ಯಾಧ್ಯಕ್ಷರಾದ ವೆಂಕಟರಮಣ ಕಡಬ, ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಸಹಸಂಚಾಲಕ ಮನೀಶ್ ಕುಲಾಲ್ ಸಹಿತ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ಪದಾಧಿಕಾರಿಗಳು , ಹಿಂದೂ ಸಂಘಟನೆಯ ಪ್ರಮುಖರು ಹಾಗೂ ಪಕ್ಷದ ಮುಖಂಡರು ಸೇರಿದಂತೆ ಹಲವಾರು ಕಾರ್ಯಕರ್ತರು ಕಾರ್ಯಲಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡರು.

 

ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಉಮೇಶ್ ಕೋಡಿಬೈಲು ವಂದಿಸಿದರು. ಸಮಿತಿಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ರೈ ಕೆದಂಬಾಡಿಮಠ ಕಾರ್ಯಕ್ರಮವನ್ನು ನಿರೂಪಿಸಿದರು.

 

ಕಾರ್ಯಕ್ರಮಕ್ಕೂ ಮೊದಲಾಗಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ನಡೆಸಲಾಯಿತು.