ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಧರ್ಮಸಂಗಮ : ಕಾರ್ಯಕರ್ತರ ಮಹಾಸಭೆ ಯಶಸ್ವಿ

  • 25 Dec 2024 02:43:59 PM

ಪುತ್ತೂರು : ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗ ಡಿ.28 - 29ರಂದು ಜರಗಲಿರುವ ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಧರ್ಮಸಂಗಮ ಕಾರ್ಯಕ್ರಮಕ್ಕೆ ಆನ್ ಲೈನ್ ನಲ್ಲಿ ನೊಂದಾಯಿತ ಕಾರ್ಯಕರ್ತರ ಮಹಾಸಭೆ ಡಿ.22ರಂದು ಸುಭದ್ರ ಕಲ್ಯಾಣ ಮಂಟಪದಲ್ಲಿ ಜರಗಿತು.

 

 

ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ಮಾತನಾಡಿ, ಈ ಬಾರಿಯ ಕಾರ್ಯಕ್ರಮ ಭಕ್ತರ ಭಾರಿ ಸಂಖ್ಯೆಯ ಪಾಲ್ಗೊಳ್ಳುವಿಕೆಯನ್ನು ನಿರೀಕ್ಷಿಸುತ್ತಿದ್ದು, ಅದನ್ನು ಯಶಸ್ವಿಯಾಗಿ ನಿಭಾಯಿಸಲು ಕಾರ್ಯಕರ್ತರ ಶ್ರಮ ಮತ್ತು ಸಮರ್ಪಣೆ ಅತ್ಯಂತ ಮುಖ್ಯವಾಗಿದೆ ಎಂದು ಹೇಳಿದರು. ಜೊತೆಗೆ ಕಾರ್ಯಕರ್ತರು ಯಾವುದೇ ಸೂಚನೆ ನೀಡದೇ ಬೆಳಗ್ಗಿನ ಜಾವದವರೆಗೆ ಕಾರ್ಯ ನಿರ್ವಹಿಸುತ್ತಿರುವುದನ್ನು ಗಮನಿಸಿ, ಅವರ ತ್ಯಾಗ ಮತ್ತು ಸೇವೆಯನ್ನು ಮೆಚ್ಚಿಕೊಂಡು ಧನ್ಯವಾದ ಹೇಳಿದರು.

 

ಗೌರವಾಧ್ಯಕ್ಷರಾದ ಗೋಪಾಲಕೃಷ್ಣ ಭಟ್ ಅವರು ಸಭೆಯ ಅಧ್ಯಕ್ಷತೆಯನ್ನು ವಹಿಸಿ, ಕಾರ್ಯಕ್ರಮದ ಉತ್ತಮ ನಿರ್ವಹಣೆಗಾಗಿ ಹಲವಾರು ಸೂಕ್ತ ಸೂಚನೆಗಳನ್ನು ನೀಡಿದರು. ಮತ್ತು ವಿವಿಧ ವಿಭಾಗಗಳಿಗೆ ಪ್ರತ್ಯೇಕ ಜವಾಬ್ದಾರಿಗಳನ್ನು ವಹಿಸಿ ಕೊಟ್ಟರು. 

 

 

ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಅಧ್ಯಕ್ಷ ಶಿವಪ್ರಸಾದ್ ಇಜ್ಜಾವು, ಗೌರವಾಧ್ಯಕ್ಷ ಚಂದಪ್ಪ ಮೂಲ್ಯ, ಪ್ರಮುಖರಾದ ಉಮೇಶ್ ಕೋಡಿಬೈಲು, ಸುನೀಲ್ ಬೋರ್ಕರ್, ಮನೀಶ್ ಕುಲಾಲ್, ಸುಜಿತ್ ಕಜೆ ಮುಂತಾದವರು ಸಭೆಯಲ್ಲಿ ಉಪಸ್ಥಿತರಿದ್ದರು.

 

ಪ್ರಧಾನ ಕಾರ್ಯದರ್ಶಿಯವರಾದ ರವಿ ಕುಮಾರ್ ರೈ ಕೆದಂಬಾಡಿಮಠ ಸ್ವಾಗತಿಸಿ ಧನ್ಯವಾದಗೈದರು. ಈ ಮಹಾಸಭೆಯಲ್ಲಿ ವಿವಿಧ ವಿಭಾಗಗಳಿಗೆ ನೇಮಿಸಲ್ಪಟ್ಟ 200ಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸಿದ್ದರು.