ಬೆಳ್ತಂಗಡಿ: ವಿಶ್ವ ಹಿಂದೂ ಪರಿಷದ್ ಮತ್ತು ಬಜರಂಗದಳ ಬೆಳ್ತಂಗಡಿ ಪ್ರಖಂಡವು ಮೃಂತ್ಯುಂಜಯ ನದಿಯಲ್ಲಿ ಮಾತೃಸ್ವರೂಪಿ ಗೋಮಾತೆಯ ಅಂಗಾಂಗ ಮತ್ತು ಕರುಗಳನ್ನು ಎಸೆದು ಹಿಂದೂ ಸಮುದಾಯದ ಭಾವನೆಗೆ ಧಕ್ಕೆ ತರುವಂತಹ ಕೃತ್ಯವನ್ನು ಗಂಭೀರವಾಗಿ ಪರಿಗಣಿಸಿದೆ. ಈ ಕೃತ್ಯವು ಹಿಂದೂ ಜನತೆಯ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಆದ್ದರಿಂದ ಇದರ ವಿರುದ್ಧದ ಹೋರಾಟಕ್ಕೆ ಬೃಹತ್ ಪ್ರತಿಭಟನೆಯನ್ನು ಆಯೋಜಿಸಿದೆ.
ಇಂತಹ ಕೃತ್ಯಕ್ಕೆ ಕಾರಣರಾದ ದುಷ್ಕರ್ಮಿಗಳ ವಿರುದ್ಧ ಯಾವುದೇ ರೀತಿಯ ಕ್ರಮ ಕೈಗೊಳ್ಳದೇ ಇರುವುದು ಹಾಗೂ ಪೋಲಿಸ್ ಇಲಾಖೆಯ ನಿರ್ಲಕ್ಷ್ಯತೆಯು ಹಿಂದು ಭಾಂಧವರ ಆಕ್ರೋಶಕ್ಕೆ ಮತ್ತಷ್ಟು ಕಾರಣವಾಗಿದೆ. ಈ ಸಂದರ್ಭವನ್ನು ಗಂಭೀರವಾಗಿ ಪರಿಗಣಿಸಿ, ನ್ಯಾಯ ಒದಗಿಸುವಂತೆ ಸರ್ಕಾರ ಮತ್ತು ಇಲಾಖೆಯ ವಿರುದ್ಧ ಒತ್ತಾಯಿಸುದಕ್ಕಾಗಿ ಈ ಪ್ರತಿಭಟನೆಯು ನಡೆಯಲಿದೆ.
ಪ್ರತಿಭಟನೆ 2024ರ ಡಿಸೆಂಬರ್ 30 ಸೋಮವಾರ ಬೆಳಗ್ಗೆ 10:00 ಗಂಟೆಗೆ ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆ ಪೇಟೆಯಲ್ಲಿ ನಡೆಯಲಿದೆ.