ಬಂಟ್ವಾಳ: ಹಿಂದು ಜಾಗರಣ ವೇದಿಕೆ ಬಂಟ್ವಾಳ ತಾಲೂಕು, ಮಂಗಳೂರು ಗ್ರಾಮಾಂತರ ಜಿಲ್ಲೆ ಇದರ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದ ಮತ್ತು ನೇತಾಜಿ ಸುಭಾಷ್ ಚಂದ್ರಬೋಸ್ ಜನ್ಮ ಜಯಂತಿ ಅಂಗವಾಗಿ ಹಿಂದೂ ಯುವ ಸಮಾವೇಶವನ್ನು ಮಾರ್ಚ್ 2, 2025, ಆದಿತ್ಯವಾರದಂದು ಆಯೋಜಿಸಲಾಗಿದೆ.
ಈ ಕಾರ್ಯಕ್ರಮದ ಅಂಗವಾಗಿ ಮಧ್ಯಾಹ್ನ 3:30 ಗಂಟೆಗೆ ಕೈಕಂಬ ದ್ವಾರದಿಂದ ಭವ್ಯ ಶೋಭಾಯಾತ್ರೆ ಪ್ರಾರಂಭಗೊಳ್ಳಲಿದೆ. ಶೋಭಾಯಾತ್ರೆಯ ಬಳಿಕ ಬಿಸಿ ರೋಡ್ ರಕ್ತೇಶ್ವರಿ ದೇವಾಲಯದ ಮುಂಭಾಗದಲ್ಲಿ ಪ್ರಮುಖ ವಕ್ತಾರರು ಉಪಸ್ಥಿತರಿರುವ ಸಭಾ ಕಾರ್ಯಕ್ರಮ ಜರಗಲಿದೆ.
ತಾವೆಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಮುಖೇನ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಸಂಯೋಜಕರು ಮತ್ತು ಸರ್ವ ಸದಸ್ಯರು ಹಿಂದು ಜಾಗರಣ ವೇದಿಕೆ ಬಂಟ್ವಾಳ ತಾಲೂಕು ಮಂಗಳೂರು ಗ್ರಾಮಾಂತರ ಜಿಲ್ಲೆ ವಿನಂತಿಸಿದ್ದಾರೆ.