ಬಂಟ್ವಾಳ: ಬಂಟ್ವಾಳ ತಾಲೂಕಿನ ಶ್ರೀ ಕಾರಿಂಜೇಶ್ವರ ಕ್ಷೇತ್ರ ಸಂರಕ್ಷಣಾ ಸಮಿತಿಯ ವತಿಯಿಂದ ಶಿವರಾತ್ರಿಯ ಪ್ರಯುಕ್ತ ಫೆಬ್ರವರಿ 26ರಂದು ಸಂಜೆ 6:00 ಗಂಟೆಯಿಂದ ಶಿವ ಮಾಲಾಧಾರಣೆ ಹಾಗೂ “ಕೋಟಿ ಶಿವ ಪಂಚಾಕ್ಷರಿ ಪಠಣ” ಕಾರ್ಯಕ್ರಮ ಆಯೋಜಿಸಲಾಗಿದೆ.
ಶಿವರಾತ್ರಿ ಹಬ್ಬದ ಪ್ರಯುಕ್ತ ನಡೆಯುವ ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಲು ಸಮಿತಿಯ ಪದಾಧಿಕಾರಿಗಳು ಆಹ್ವಾನಿಸಿದ್ದಾರೆ. ಶಿವನ ಕೃಪೆಗೆ ಪಾತ್ರರಾಗಲು, ಈ ಮಹತ್ತ್ವದ ಧಾರ್ಮಿಕ ಕಾರ್ಯಕ್ರಮದಲ್ಲಿ ಎಲ್ಲರೂ ಪಾಲ್ಗೊಳ್ಳಬೇಕೆಂದು ಸಮಿತಿಯವರು ವಿನಂತಿಸಿ ಕೊಂಡಿದ್ದಾರೆ.