ಮಂಗಳೂರು: ಧಾರಾಕಾರ ಮಳೆಯಿಂದ ಪಂಪ್ವೆಲ್ ಸೇತುವೆ ಜಲಾವೃತ;ಜನಜೀವನ ಅಸ್ತವ್ಯಸ್ತ!

  • 26 May 2025 02:44:26 PM


ಮಂಗಳೂರು: ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಧಾರಾಕಾರ ಮಳೆ ಸುರಿಯುತ್ತಿದ್ದು, ನಗರದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. 

 

ಪಂಪ್ವೆಲ್ ಸೇತುವೆಯ ಕೆಳಭಾಗ ಸಂಪೂರ್ಣವಾಗಿ ಜಲಾವೃತಗೊಂಡಿದ್ದು, ವಾಹನ ಸವಾರರು ಸಂಚರಿಸಲು ಪರದಾಡುವ ಸ್ಥಿತಿ ಉಂಟಾಗಿದೆ. ಮಳೆ ನೀರಿನಿಂದ ರಸ್ತೆಗಳು ತುಂಬಿ ಜನರು ದಿನನಿತ್ಯದ ಕೆಲಸಗಳಿಗಾಗಿ ತಿರುಗಾಡಲು ಸಂಕಷ್ಟದಿಂದ ಸಾಗುತ್ತಿದ್ದಾರೆ.

 

ಇಲ್ಲಿನ ರಾಜಕಾಲುವೆಗಳಲ್ಲಿ ನೀರು ಹರಿಯುವ ಪ್ರಮಾಣ ಹೆಚ್ಚಾದುದರಿಂದ ನೀರು ತುಂಬಿಹೋದ ಪರಿಸ್ಥಿತಿ ಉಂಟಾಗಿದೆ. 

 

ಮುಖ್ಯ ರಸ್ತೆಗಳಲ್ಲಿ ನೀರು ನಿಂತು ಟ್ರಾಫಿಕ್ ಜಾಂ ಉಂಟಾಗಿದ್ದು, ವಾಹನಗಳ ಓಡಾಟಕ್ಕೆ ತೀವ್ರ ಅಡಚಣೆಗಳಾಗಿವೆ. 

 

ರಸ್ತೆಗಳ ತಗ್ಗು ಪ್ರದೇಶಗಳಲ್ಲಿ ನೀರು ತುಂಬಿ ಹರಿಯುತ್ತಿರುವ ದೃಶ್ಯ ಆತಂಕಕಾರಿಯಾಗಿದೆ. ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಮುಂದೆ ಯಾವ ರೀತಿಯ ಪರಿಸ್ಥಿತಿಯನ್ನು ಎದುರಿಸಬೇಕಾಗಿ ಬರುತ್ತದೆ ಎಂಬ ಆತಂಕ ಸೃಷ್ಟಿಯಾಗಿದೆ.