ಚಿಕ್ಕಮಗಳೂರು: ಮಲೆನಾಡಿನಲ್ಲಿ ನಕ್ಸಲರಿದ್ದಾರೆ ಎನ್ನುವ
ಶಂಕೆಯಿಂದ ಇಬ್ಬರು ನಕ್ಸಲ್ ಶಂಕಿತರನ್ನು ಶೃಂಗೇರಿ ಪೊಲೀಸ್
ಠಾಣೆಗೆ ಕರೆತಂದು ವಿಚಾರಣೆ ನಡೆಸಿರುವ ಬೆನ್ನಲ್ಲೆ ನಕ್ಸಲ್
ನಿಗ್ರಹ ದಳದ ಸಿಬ್ಬಂದಿ ಮತ್ತು ಪೊಲೀಸರು ಕಾರ್ಯಾಚರಣೆಗೆ
ಇಳಿದಿದ್ದಾರೆ.
ಇದೀಗ ಕಾರ್ಯಾಚರಣೆಯಲ್ಲಿ ಕೊಪ್ಪ ತಾಲೂಕು ಕಡೆಗುಂಡಿ
ಗ್ರಾಮದವರೊಬ್ಬರ ಮನೆಯಲ್ಲಿ ಮೂರು ಬಂದೂಕು ಪತ್ತೆಯಾಗಿದೆ. ಈ ಕುರಿತಂತೆ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನು ಗ್ರಾಮಸ್ಥರೊಬ್ಬರ ಮನೆಯಲ್ಲಿ ಬಂದೂಕು ಸಿಕ್ಕಿದೆ ಎನ್ನುವ ವಿಚಾರಕ್ಕೆ ಸಂಬಂಧಪಟ್ಟಂತೆ, ನಕ್ಸಲರ ತಂಡ ಭೇಟಿ ನೀಡಿದ್ದಾರೆಂಬ ಸುಳಿವು ಸಿಕ್ಕಿದೆ ಎಂಬ ಮಾಹಿತಿ ಹೊರಬಿದ್ದಿದೆ.
ಸ್ಥಳಕ್ಕೆ ಪಶ್ಚಿಮ ವಲಯ ಐಜಿಪಿ ಅಮಿತ್, ಸಿಂಗ್ ಸಿಐಡಿ ಎಡಿಜಿಪಿ ಪ್ರಣಬ್ ಮೊಹಂತಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.
ನಕ್ಸಲ್ ಪ್ರಭಾವಿತ ಪ್ರದೇಶಗಳಲ್ಲಿ ತೀವ್ರ ಕೂಂಬಿಂಗ್ ಕಾರ್ಯಾಚರಣೆ ನಡೆಸಲಾಗುತ್ತಿದೆ. ಚೆಕ್‌ಪೋಸ್ಟ್ ಗಳಲ್ಲಿನಾ ಕಾಬಂಧಿ ಹಾಕಿ ತಪಾಸಣೆಯನ್ನು ತೀವ್ರಗೊಳಿಸಲಾಗಿದೆ.