ಗುಜರಾತ್: ಅಹ್ಮದಾಬಾದ್ನಲ್ಲಿ ಏರ್ ಇಂಡಿಯಾ ಡ್ರೀಮ್‌ಲೈನರ್ ಪತನ: ಗುಜರಾತ್ ನ ಮಾಜಿ ಸಿಎಂ ವಿಜಯ್ ರೂಪಾನಿ ವಿಮಾನದಲ್ಲಿದ್ದರೆಂದು ಶಂಕೆ!

  • 12 Jun 2025 03:50:08 PM


ಗುಜರಾತ್: ಅಹಮದಾಬಾದ್‌ನಿಂದ ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ಬೋಯಿಂಗ್ 787 ಡ್ರೀಮ್‌ಲೈನರ್ ಇಂದು ಮಧ್ಯಾಹ್ನ ತಾಂತ್ರಿಕ ದೋಷದಿಂದ ಪತನಗೊಂಡಿದೆ. 

 

ಈ ವಿಮಾನದಲ್ಲಿ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸಹ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗುತ್ತಿದೆ.

 

ಟೇಕಾಫ್ ಆದ ಸುಮಾರು 10 ನಿಮಿಷಗಳ ನಂತರ ತಾಂತ್ರಿಕ ದೋಷದಿಂದ ವಿಮಾನವು ಜನವಸತಿ ಪ್ರದೇಶದ ಕಟ್ಟಡದ ಮೇಲೆ ಬಿದ್ದು ಅಪಘಾತಕ್ಕೀಡಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

 

 ವಿಮಾನದಲ್ಲಿ ಸಿಬ್ಬಂದಿ ಸೇರಿ ಒಟ್ಟು 242 ಮಂದಿ ಇದಿದ್ದು 

ವಿಮಾನ ಸಂಪೂರ್ಣ ಹಾನಿಗೊಳಗಾಗಿದ್ದು, ಬೆಂಕಿಯಿಂದ ಸುಟ್ಟುಹೋಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಅಂಬುಲೆನ್ಸ್‌ಗಳು ಧಾವಿಸಿ ರಕ್ಷಣಾ ಕಾರ್ಯ ನಡೆಯುತ್ತಿದೆ.

 

ಪ್ರಯಾಣಿಕರ ಕುರಿತಾಗಿಯೂ ಅವರ ಸ್ಥಿತಿ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.