ಸುಳ್ಯ: ಕೇರಳ ಮೂಲದ ಹಿಂದೂ ಯುವತಿ ಹಾಗೂ ಮುಸ್ಲಿಂ ಯುವಕನು ಬೆಂಗಳೂರಿಗೆ ಖಾಸಗಿ ಬಸ್‌ನಲ್ಲಿ ಒಟ್ಟಿಗೆ ಪ್ರಯಾಣಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಭಜರಂಗದಳ ಕಾರ್ಯಕರ್ತರು ತಕ್ಷಣ ಕಾರ್ಯಪ್ರವೃತ್ತರಾಗಿದ್ದು, ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ಪಡೆದುಕೊಂಡ ಪೊಲೀಸರು ಬಸ್ಸನ್ನು ತಡೆದು ಇಬ್ಬರನ್ನೂ ಕೆಳಗಿಳಿಸಿ ವಿಚಾರಣೆ ನಡೆಸಿದ್ದಾರೆ. ಅಧಿಕಾರಿಗಳ ಸಮ್ಮುಖದಲ್ಲಿ ಯುವತಿ ಹಾಗೂ ಯುವಕ ವಿವರಣೆ ನೀಡಿದ್ದು, ವಿಚಾರಣೆ ಬಳಿಕ, ಪೊಲೀಸರು ಇಬ್ಬರಿಗೂ ಮತ್ತೆ ಅದೇ ಖಾಸಗಿ ಬಸ್ಸಿನಲ್ಲಿ ಪ್ರಯಾಣ ಮುಂದುವರಿಸಲು ಅವಕಾಶ ನೀಡಿದ್ದಾರೆ.
ಈ ಸಂಬಂಧ ಸಾರ್ವಜನಿಕ ವಲಯದಲ್ಲಿ ವಿವಿಧ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದೆ.