ಮಂಗಳೂರು: ಹಿಂದೂ ಸಂಘಟನೆಗಳ ವಿರುದ್ಧದ ದೌರ್ಜನ್ಯ ಖಂಡಿಸಿ: ಇಂದು ಸಂಜೆ 4 ಕ್ಕೆ ಮಂಗಳೂರಿನಲ್ಲಿ ಹಿಂದೂ ಜಾಗರಣ ವೇದಿಕೆಯಿಂದ ಬೃಹತ್ ಪ್ರತಿಭಟನೆ!

  • 07 Jul 2025 10:13:47 AM


ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹಿಂದೂ ಸಂಘಟನೆಗಳ ಸಾಮಾಜಿಕ ಕಾರ್ಯಕರ್ತರ ವಿರುದ್ಧ ಪೊಲೀಸ್ ಇಲಾಖೆ ಕೈಗೊಂಡಿರುವ ಕಾನೂನು ವಿರೋಧಿ ಕ್ರಮಗಳನ್ನು ಖಂಡಿಸಿ, ಹಿಂದು ಜಾಗರಣ ವೇದಿಕೆ ಮಂಗಳೂರು ಮಹಾನಗರ ಘಟಕದ ನೇತೃತ್ವದಲ್ಲಿ ಜುಲೈ 7, 2025 ಇಂದು ಸೋಮವಾರ ಮಂಗಳೂರು ತಾಲೂಕು ಕಚೇರಿಯ ಮುಂದೆ ಬೃಹತ್ ಪ್ರತಿಭಟನೆ ಸಭೆ ನಡೆಯಲಿದೆ.

 

ಈ ಸಂದರ್ಭದಲ್ಲಿ ಪ್ರತಿಭಟನಾಕಾರರು, ಹಿಂದೂ ವಿರೋಧಿ ನಿಲುವು ಕೈಗೊಂಡಿರುವ ರಾಜ್ಯ ಕಾಂಗ್ರೆಸ್ ಸರಕಾರದ ಆಡಳಿತವನ್ನು ಖಂಡಿಸುತ್ತಾ, ತಮ್ಮ ಆಕ್ರೋಶ ವ್ಯಕ್ತಪಡಿಸಲಿದ್ದಾರೆ.

 

 ಹಿಂದೂ ಕಾರ್ಯಕರ್ತರ ಮೇಲೆ ತೀವ್ರ ಕಾನೂನುಬಾಹ್ಯ ಕ್ರಮಗಳು ನಡೆಯುತ್ತಿರುವ ಈ ಸಂದರ್ಭದಲ್ಲಿ, ಸಂಘಟನೆಗಳು ಸಂಘಟಿತವಾಗಿ ಸರ್ಕಾರದ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ.

 

ಹಿಂದು ಜಾಗರಣ ವೇದಿಕೆಯ ಮುಖಂಡರು ಹಾಗೂ ವಿವಿಧ ಹಿಂದೂಪರ ಸಂಘಟನೆಗಳ ಪ್ರತಿನಿಧಿಗಳು ಈ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ.