ಕೇಂದ್ರದಿಂದ ಮಹತ್ವದ ನೇಮಕಾತಿ: ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ವಿಭು ಭಕ್ರು ನೇಮಕ

  • 15 Jul 2025 04:12:48 PM


ಬೆಂಗಳೂರು: ಕೇಂದ್ರ ಸರ್ಕಾರದಿಂದ ಹೊರಡಿಸಲಾದ ಆದೇಶದಂತೆ ನ್ಯಾ. ವಿಭು ಭಕ್ರು ಅವರನ್ನು ಕರ್ನಾಟಕ ಹೈಕೋರ್ಟ್‌ನ ಹೊಸ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ. 

 

ಪ್ರಸ್ತುತ ಹೈಕೋರ್ಟ್‌ನ ನ್ಯಾಯಮೂರ್ತಿಯವರಾದ ಕಾಮೇಶ್ವರ್ ರಾವ್ ಅವರನ್ನು ದೆಹಲಿ ಹೈಕೋರ್ಟಿಗೆ ವರ್ಗಾವಣೆ ಮಾಡಲಾಗಿದೆ

 

ನ್ಯಾ. ವಿಭು ಭಕ್ರು ಅವರು ಈವರೆಗೂ ಸುಪ್ರೀಂ ಕೋರ್ಟ್‌, ದೆಹಲಿ ಹೈಕೋರ್ಟ್ ಮತ್ತು ವಿವಿಧ ನ್ಯಾಯಮಂಡಳಿಗಳಲ್ಲಿ ತಮ್ಮ ಸೇವೆ ಸಲ್ಲಿಸಿದ್ದಾರೆ.

 

ನ್ಯಾ. ಭಕ್ರು ಅವರು 1966ರಲ್ಲಿ ನಾಗ್ಪುರದಲ್ಲಿ ಜನಿಸಿ, ದೆಹಲಿ ವಿಶ್ವವಿದ್ಯಾಲಯದಿಂದ ವಾಣಿಜ್ಯದಲ್ಲಿ ಪದವಿ ಹಾಗೂ ಎಲ್‌ಎಲ್‌ಬಿ ಶಿಕ್ಷಣ ಪಡೆದಿದ್ದಾರೆ.

 

 1989ರಲ್ಲಿ ಚಾರ್ಟರ್ಡ್ ಅಕೌಂಟೆಂಟ್‌ ಆಗಿ ಅರ್ಹತೆ ಪಡೆದ ಅವರು, 1990ರಿಂದ ವಕೀಲರಾಗಿ ವೃತ್ತಿ ಆರಂಭಿಸಿ 2013ರಲ್ಲಿ ದೆಹಲಿ ಹೈಕೋರ್ಟ್‌ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು.

 

ಕರ್ನಾಟಕ ಅಲ್ಲದೆ ಇಡೀ ಸಂದರ್ಭದಲ್ಲಿ ಮಧ್ಯಪ್ರದೇಶ, ಜಾರ್ಖಂಡ್, ಗುವಾಹಟಿ ಹಾಗೂ ಪಾಟ್ನಾ ಹೈಕೋರ್ಟ್‌ಗಳಿಗೆ ಕೂಡ ನೂತನ ಮುಖ್ಯ ನ್ಯಾಯಮೂರ್ತಿಗಳನ್ನು ನೇಮಕ ಮಾಡಲಾಗಿದೆ.