ಮಂಜೇಶ್ವರ: ರಾಷ್ಟ್ರೀಯ ಹೆದ್ದಾರಿ ಬಳಿ ಲಾರಿ ಢಿಕ್ಕಿಯಿಂದ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವು; ಓರ್ವ ಗಂಭೀರ!

  • 16 Jul 2025 12:53:09 PM


 


ಮಂಜೇಶ್ವರ: ರಾಷ್ಟ್ರೀಯ ಕಾಮಗಾರಿಯ ಗುತ್ತಿಗೆ ಪಡೆದ ಕಂಪನಿಯ ಕಾರ್ಮಿಕರು ಕೆಲಸ ನಿರ್ವಹಿಸುತ್ತಿರುವ ವೇಳೆಯಲ್ಲಿ ಲಾರಿ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಕಾರ್ಮಿಕರು ಸಾವನ್ನಪ್ಪಿ ಇನ್ನೊಬ್ಬ ಕಾರ್ಮಿಕ ಗಂಭೀರವಾಗಿ ಗಾಯಗೊಂಡ ದುರ್ಘಟನೆ ಮಂಗಳವಾರ ಸಂಜೆ ಮಂಜೇಶ್ವರದ ಕುಂಜತ್ತೂರಿನಲ್ಲಿ ಸಂಭವಿಸಿದೆ.

 

ಮೃತರನ್ನು ಬಿಹಾರದ ರಾಜ್ ಕುಮಾರ್ ಮಾಥೂರ್ (25) ಮತ್ತು ರಾಜಸ್ಥಾನದ ದಾಮೋರ್ ಅಮಿತ್ ಗಣಪತಿ ಬಾಯ್ (23) ಎಂದು ಗುರುತಿಸಲಾಗಿದೆ.

 

 ಗಂಭೀರವಾಗಿ ಗಾಯಗೊಂಡ ಮತ್ತೊಬ್ಬ ಕಾರ್ಮಿಕನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

 

 

ಕೇರಳದ ಮಣ್ಣಾರ್ಕಾಡ್‌ನಿಂದ ಮಂಗಳೂರಿಗೆ ತೆರಳುತ್ತಿದ್ದ ಲಾರಿ, ರಾಷ್ಟ್ರೀಯ ಹೆದ್ದಾರಿಯ ಬಳಿ ಕಾರು ನಿಲ್ಲಿಸಿದ್ದ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಅತಿವೇಗದಿಂದ ನಿಯಂತ್ರಣ ತಪ್ಪಿ ಹರಿದ ಪರಿಣಾಮ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

 

 ಮೃತದೇಹಗಳನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ಸಾಗಿಸಲಾಗಿದ್ದು, ಲಾರಿ ಚಾಲಕನನ್ನು ಮಂಜೇಶ್ವರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

 

ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.