ಕಾಸರಗೋಡು: ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಜಿಲ್ಲಾಧಿಕಾರಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಮತ್ತೊಂದು ದಿನ (ಜುಲೈ 18) ರಂದು ರಜೆ ಘೋಷಿಸಿದ್ದಾರೆ.
ಈ ನಿರ್ಧಾರವು ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ತೆಗೆದುಕೊಳ್ಳಲಾಗಿದೆ. ಎಲ್ಲ ಶೈಕ್ಷಣಿಕ ಸಂಸ್ಥೆಗಳು – ಸರ್ಕಾರಿ, ಅನುದಾನಿತ, ಖಾಸಗಿ ಹಾಗೂ ಟ್ಯೂಷನ್ ಕೇಂದ್ರಗಳು ಸಹ ಈ ಆದೇಶಕ್ಕೆ ಒಳಪಟ್ಟಿರುತ್ತವೆ ಎಂದು ಸೂಚಿಸಿದ್ದಾರೆ.