ಸಿಪಿಐಎಂ ಹಿರಿಯ ನಾಯಕ, ಕೇರಳ ಮಾಜಿ ಮುಖ್ಯಮಂತ್ರಿ ವಿ.ಎಸ್. ಅಚ್ಯುತಾನಂದನ್ ಇನ್ನಿಲ್ಲ.

  • 21 Jul 2025 06:36:01 PM


ತಿರುವನಂತಪುರಂ: ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ CPI(M) ಪಕ್ಷದ ಹಿರಿಯ ನಾಯಕ ವಿ.ಎಸ್. ಅಚ್ಯುತಾನಂದನ್ (101) ಅವರು ಸೋಮವಾರ ಮಧ್ಯಾಹ್ನ 3.20ಕ್ಕೆ ತಿರುವನಂತಪುರಂನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

 

 ಜೂನ್ 23ರಂದು ಹೃದಯಾಘಾತವಾದ ಬಳಿಕ ಅವರನ್ನು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸ್ಥಿತಿ ಗಂಭೀರವಾಗಿದ್ದು, ಇಂದು ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು.

 

ಅವರ ಪಾರ್ಥಿವ ಶರೀರವನ್ನು ಮಂಗಳವಾರ ಅಲಪ್ಪುಳಕ್ಕೆ ಕೊಂಡೊಯ್ಯಲಾಗುತ್ತಿದ್ದು, ಬುಧವಾರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

 

 ಸೋಮವಾರ ಮಧ್ಯಾಹ್ನ ಮುಖ್ಯಮಂತ್ರಿ ಪಿಣರಾಯಿ ವಿಜಯನ್, CPI(M) ರಾಜ್ಯ ಕಾರ್ಯದರ್ಶಿ ಎಂ.ವಿ. ಗೋವಿಂದನ್ ಸೇರಿದಂತೆ ಹಲವು ಹಿರಿಯ ನಾಯಕರು ಆಸ್ಪತ್ರೆಗೆ ಭೇಟಿ ನೀಡಿದ್ದರು. 

 

 

 

ಅಚ್ಯುತಾನಂದನ್ ಅವರು 2006ರಿಂದ 2011ರವರೆಗೆ ಕೇರಳದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಮೂರು ಬಾರಿ ವಿರೋಧ ಪಕ್ಷದ ನಾಯಕನಾಗಿ ಕಾರ್ಯನಿರ್ವಹಿಸಿದ ಅವರು, 2019ರಿಂದ ರಾಜಕೀಯದಲ್ಲಿ ಸಕ್ರಿಯವಾಗಿರಲಿಲ್ಲ.

 

 ತಮ್ಮ ಐದು ದಶಕಗಳ ರಾಜಕೀಯ ಜೀವನದಲ್ಲಿ ಅಚ್ಯುತಾನಂದನ್ ಅವರು ಶುದ್ಧ ಆಡಳಿತ, ಜನಪರ ಹೋರಾಟ ಹಾಗೂ ಸಾಮಾಜಿಕ ನಿಷ್ಠೆಗೆ ಮಾದರಿಯಾಗಿ ಉಳಿದಿದ್ದಾರೆ.

 

 ಅವರ ಅಗಲಿಕೆ ಕೇರಳದ ರಾಜಕೀಯದಲ್ಲಿ ಭಾರೀ ಶೂನ್ಯವನ್ನು ಬಿಟ್ಟಿದೆ.