ಉಡುಪಿ: ಶಿರೂರು ಮೂರುಕೈ ಪೇಟೆಯ ನೀರ್ ಜೆಡ್ಡು ಎಂಬಲ್ಲಿ ದನವನ್ನು ಹಿಂಸಾತ್ಮಕವಾಗಿ ಹಲ್ಲೆ ಮಾಡಿ ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಪ್ರಕರಣವೊಂದು ಸಂಭವಿಸಿದೆ.
ಘಟನೆಯ ವೇಳೆ ಸುದೀಪ್ ಅವರು ಸ್ಥಳಕ್ಕೆ ಬಂದ ಸಂದರ್ಭದಲ್ಲಿ ಮೂವರು ದುಷ್ಕರ್ಮಿಗಳಲ್ಲಿ ಒಬ್ಬನು ಪರಾರಿಯಾಗಿ ಇನ್ನುಳಿದ ಇಬ್ಬರು ದನವನ್ನು ತುಂಬಿಸಿಕೊಂಡು ವಾಹನದಲ್ಲಿ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಸುದೀಪ್ ಅವರು ನೀಡಿದ ದೂರಿನಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ಆರೋಪಿಗಳಾದ ಮುಜಾಫಿರ್ ಮತ್ತು ಕೃಷ್ಣ ನಾಯ್ಕರನ್ನು ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನೊಬ್ಬ ಆರೋಪಿಯು ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ.