ನಮ್ಮೂರಿನ‌‌ ನಂದಿನಿಗೆ ರಾಷ್ಟ್ರೀಯ ಮನ್ನಣೆ!;ನಾಳೆಯಿಂದ ನಂದಿನಿ ಉತ್ಪನ್ನಗಳ ಮಾರಾಟಕ್ಕೆ ಚಾಲನೆ...!!

  • 20 Nov 2024 07:54:41 PM

ರಿಪಬ್ಲಿಕ್ ಹಿಂದೂ:- ಕರ್ನಾಟಕದಲ್ಲಿ ನಂದಿನಿ ಹೆಸರು ಕೇಳದವರು ಯಾರಿದ್ದಾರೆ ಹೇಳಿ. ಕೆಎಂಎಫ್ ನಂದಿನಿ ಬ್ರಾಂಡ್ ಹೆಸರು ಎಲ್ಲರಿಗೂ ಚಿರಪರಿಚಿತ. ನಂದಿನಿಯ ಎಲ್ಲಾ ತೆರನಾದ ಉತ್ಪನ್ನಗಳು ಮಾರುಕಟ್ಟೆಯಲ್ಲಿ ತನ್ನದೇ ಆದ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಇದೀಗ ನಂದಿನಿ ಗ್ರಾಹಕರಿಗೆ ಮತ್ತೊಂದು ಗುಡ್ ನ್ಯೂಸ್ ಕೇಳಿಬಂದಿದೆ. 

*ದೆಹಲಿಯಲ್ಲೂ ಇನ್ಮುಂದೆ ನಂದಿನಿ ಕಲರವ...!*

ಕರ್ನಾಟಕದಲ್ಲಿ ಮನೆ ಮಾತಾಗಿರುವ ಕೆಎಂಎಫ್‌ನ 'ನಂದಿನಿ' ಬ್ರಾಂಡ್ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಾದ ನವದೆಹಲಿಯಲ್ಲೂ ವಿಸ್ತಾರಗೊಳ್ಳುತ್ತಿದೆ. ಕೆಎಂಎಫ್‌ ಈ ತಿಂಗಳು ನವದೆಹಲಿಯಲ್ಲಿ ನಂದಿನಿ ಉತ್ಪನ್ನಗಳ ಮಾರಾಟಕ್ಕೆ ಚಾಲನೆಯನ್ನು ನೀಡಲಿದೆ. ನವೆಂಬರ್ 21ರಿಂದ ಅಂದ್ರೆ ನಾಳೆಯಿಂದ ದೆಹಲಿಯಲ್ಲಿ ನಂದಿನಿ ಉತ್ಪನ್ನಗಳು ಜನರಿಗೆ ಲಭ್ಯವಾಗಲಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನವೆಂಬರ್ 21ರಂದು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಂದಿನಿ ಬ್ರಾಂಡ್‌ನ ಹಾಲು, ಮೊಸರು ಸೇರಿದಂತೆ ವಿವಿಧ ಉತ್ಪನ್ನಗಳ ಮಾರಾಟಕ್ಕೆ ಚಾಲನೆ ನೀಡಲಿದ್ದಾರೆ.

*ಈ ಬಗ್ಗೆ ಕೆಎಂಎಫ್ ನ ವ್ಯವಸ್ಥಾಪಕ ನಿರ್ದೇಶಕ ಹೇಳೋದೇನು ಗೊತ್ತಾ...?

ಈ ಬಗ್ಗೆ ಮಾತನಾಡಿರುವ ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ ಜಗದೀಶ್ ಮಾತನಾಡಿ ` ಈಗಾಗಲೇ ನಂದಿನಿ ಬ್ರಾಂಡ್ ಕರ್ನಾಟಕದ ಮೂಲೆಮೂಲೆಗಳಲ್ಲಿ ತನ್ನದೇ ಆದ ಖ್ಯಾತಿಯನ್ನು ಪಡೆದುಕೊಂಡಿದೆ. ಇದೀಗ ನಮ್ಮ ನಂದಿನಿ ಬ್ರಾಂಡ್ ದೆಹಲಿಯತ್ತ ದಾಪುಗಾಲಿಡುತ್ತಿದೆ. ಇದೇ ಬರುವ ನವೆಂಬರ್ ೨೬ರಂದು ಬೆಂಗಳೂರಿನಲ್ಲಿ ಇಡ್ಲಿ ಮತ್ತು ದೋಸೆ ಹಿಟ್ಟು ಮಾರಾಟಕ್ಕೆ ಚಾಲನೆ ಸಿಗಲಿದೆ. ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನವೆಂಬರ್ 21ರಂದು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಂದಿನಿ ಬ್ರಾಂಡ್‌ನ ಹಾಲು, ಮೊಸರು ಸೇರಿದಂತೆ ವಿವಿಧ ಉತ್ಪನ್ನಗಳ ಮಾರಾಟಕ್ಕೆ ಚಾಲನೆ ನೀಡಲಿದ್ದಾರೆ ಎಂದು ಹೇಳಿದರು.