ಮಹಾರಾಷ್ಟ್ರ:ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಕೇವಲ 10 ಸ್ಥಾನಗಳನ್ನಷ್ಟೇ ಪಡೆದು ಹೀನಾಯ ಸೋಲಿಗೀಡಾದ ಕಾಂಗ್ರೆಸ್ ಪಕ್ಷ ಕಂಗಾಲಾಗಿದೆ. ಇದೀಗ ಗಾಯದ ಮೇಲೆ ಬರೆ ಎಳೆದಂತೆ ಮಹಾರಾಷ್ಟ್ರ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ನಾನಾ ಪಟೋಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ದಿಢೀರ್ ರಾಜೀನಾಮೆಗೆ ಕಾರಣವೇನು,ಕಾಂಗ್ರೆಸ್ ಕತೆ ಏನಾಗಲಿದೆ ಎಂಬಿತ್ಯಾದಿ ವಿಚಾರಗಳ ಬಗ್ಗೆ ಮಾಹಿತಿ ಇಲ್ಲಿದೆ.
ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದ ನಾನ ಪಟೋಲ್!
ಸದ್ಯ, ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ನಾನಾ ಪಟೋಲ್ ಮೂಲತಃ ಬಿಜೆಪಿ ಪಕ್ಷದವರು. 2018ರಲ್ಲಿ ಕಾಂಗ್ರೆಸ್ ಸೇರಿದ ಪಟೋಲ್ ಸಾಂಕೋಲಿ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದು ನಾಲ್ಕು ಬಾರಿ ಶಾಸಕರಾಗಿದ್ದರು .ಆದರೆ ಇದೀಗ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನೊಂದಿಗೆ ಕೊಚ್ಚಿ ಹೋದ ಕಾರಣ ಬದಲಾವಣೆಯ ಪರ್ವ ಆರಂಭವಾಗಿದೆ.
ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ಯಾಕೆ?
ನಾನ ಪಟೋಲ್ ಕಾಂಗ್ರೆಸ್ ಪಕ್ಷದಿಂದ ನಾಲ್ಕು ಬಾರಿ ಗೆದ್ದು ಶಾಸಕರಾದವರು.ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪಟೋಲ್ ಅವರಿಗೆ ಸಾಕಷ್ಟು ಜವಾಬ್ದಾರಿ ನೀಡಲಾಗಿತ್ತು.ಆದರೆ ಈ ಬಾರಿ ಪಕ್ಷ ಹೀನಾಯ ಸೋಲು ಕಂಡ ಕಾರಣ ನಾನ ಪಟೋಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದು ಮಹಾರಾಷ್ಟ್ರ ಕಾಂಗ್ರೆಸ್ ಪಕ್ಷಕ್ಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ.