ಧರ್ಮಸ್ಥಳ ಕ್ಷೇತ್ರದಲ್ಲಿ ನ.26ರಿಂದ 30ರವರೆಗೆ ವಿಜೃಂಭಣೆಯಿಂದ ನಡೆಯಲಿದೆ ಲಕ್ಷದೀಪೋತ್ಸವ..!!

  • 27 Nov 2024 04:13:42 PM

ಧರ್ಮಸ್ಥಳ: ದ.ಕ ಜಿಲ್ಲೆಯ ಪ್ರಸಿದ್ಧ ದೇವಾಲಯಗಳಲ್ಲಿ ಧರ್ಮಸ್ಥಳ ಮಂಜುನಾಥೇಶ್ವರ ದೇಗುಲವೂ ಒಂದು. ಇಲ್ಲಿಗೆ ಅನೇಕ ರಾಜಕೀಯ ಮುಖಂಡರು, ಸಿನಿಮಾ ಸೆಲೆಬ್ರೆಟಿಗಳು ಆಗಾಗ ಆಗಮಿಸುತ್ತಿರುತ್ತಾರೆ.‌ ಶ್ರೀ ಕ್ಷೇತ್ರದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮ ಅತ್ಯಂತ ಅದ್ಧೂರಿಯಾಗಿ ನಡೆಯುತ್ತದೆ. ಈ ದಿನಕ್ಕೆ ಅದೆಷ್ಟೋ ಭಕ್ತಾದಿಗಳು ಕಾದು ಕೂತಿರುತ್ತಾರೆ. ಈ ವಿಜೃಂಭಣೆಯಿಂದ ನಡೆಯುವ ಆಚರಣೆಗೆ ಬೇರೆ ಬೇರೆ ಜಿಲ್ಲೆಗಳಿಂದ, ರಾಜ್ಯಗಳಿಂದ ಭಕ್ತಾದಿಗಳು ಆಗಮಿಸುತ್ತಾರೆ. 

 

ನ.26ರಿಂದ ನ.30ರವರೆಗೆ ನಡೆಯಲಿದೆ ಲಕ್ಷದೀಪೋತ್ಸವ...!

 

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.‌ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ದೇಗುಲದಲ್ಲಿ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವವು ನ.೨೬ರಿಂದ ನ.೩೦ರವರೆಗೆ ಅತ್ಯಂತ ಸಂಭ್ರಮದಿಂದ ನಡೆಯಲಿದೆ. 

 

ನ.26ರಿಂದ ನಡೆಯಲಿರುವ ಕಾರ್ಯಕ್ರಮಗಳು:- 

 

ನ.26 ಸಂಜೆ ಮೂರು ಗಂಟೆಗೆ ಉಜಿರೆಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜಾ, ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಮಾಜಿ ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್ ನೇತೃತ್ವದಲ್ಲಿ 25000ಕ್ಕೂ ಮಿಕ್ಕಿ ಭಕ್ತಾದಿಗಳು ಭಾಗವಹಿಸಲಿರುವರು. ಶಿವಪಂಚಾಕ್ಷರಿ ಮಂತ್ರ, ಭಜನೆ, ಪ್ರಾರ್ಥನೆಯೊಂದಿಗೆ ಮೆರವಣಿಗೆ ಸಾಗಿಬರಲಿದೆ. ಲಕ್ಷದೀಪೋತ್ಸವದ ಪ್ರಯುಕ್ತ ಅಮೃತವರ್ಷಿಣಿ ಸಭಾಭವನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು, ರಾಜ್ಯಮಟ್ಟದ ವಸ್ತು ಪ್ರದರ್ಶನ, ಬಸದಿಯಲ್ಲಿ ಸಮವಸರಣ ಪೂಜೆ, ಸಾಹಿತ್ಯ ಸಮ್ಮೇಳನದಂತಹ ಅರ್ಥಪೂರ್ಣ ಕಾರ್ಯಕ್ರಮಗಳು ನಡೆಯಲಿದೆ. ನ.26ರಂದು ನಡೆಯುವ ಸರ್ವಧರ್ಮ ಸಮ್ಮೇಳನವನ್ನು ರಾಜ್ಯ ಗೃಹ ಸಚಿವ ಡಾ. ಜಿ ಪರಮೇಶ್ವರ್ ಉದ್ಘಾಟಿಸಲಿದ್ದಾರೆ.