ಬೆಂಗಳೂರು : ರಾಜ್ಯದಾದ್ಯಂತ ಸಾಕಷ್ಟು ಕೋಲಾಹಲ ಎಬ್ಬಿಸಿದ್ದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ ಮಧ್ಯಂತರ ಜಾಮೀನಿನ ಮೇಲೆ ಹೊರಬಂದಿದ್ದಾರೆ. ಚಿಕಿತ್ಸೆಗಾಗಿ ಹೊರ ಬಂದಿರುವ ದರ್ಶನ್ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುತ್ತಿಲ್ಲ ಎನ್ನುವ ವಿಚಾರದ ಬಗ್ಗೆ ಮಾಧ್ಯಮಗಳ ವರದಿ ಹೆಚ್ಚಾದ ಬೆನ್ನಲ್ಲೇ ಇದೀಗ ದರ್ಶನ್ ಆಸ್ಪತ್ರೆ ಸೇರಿದ್ದಾರೆ. ಸದ್ಯ, ದರ್ಶನ್ ಆಸ್ಪತ್ರೆಯ ಬೆಡ್ ಮೇಲೆ ಮಲಗಿರುವ ಫೋಟೋ ಸಾಕಷ್ಟು ವೈರಲ್ ಆಗುತ್ತಿದೆ.
ಬಿಜಿಎಸ್ ಆಸ್ಪತ್ರೆಗೆ ದಾಖಲಾದ ದರ್ಶನ್!
ಬೆನ್ನುಹುರಿಯ ಶಸ್ತ್ರಚಿಕಿತ್ಸೆಗಾಗಿ 6 ವಾರಗಳ ಕಾಲ ನಟ ದರ್ಶನ್ ಮಧ್ಯಂತರ ಜಾಮೀನು ಪಡೆದಿದ್ದಾರೆ. ಈ ನಡುವೆ ರೇಣುಕಾಸ್ವಾಮಿ ಪ್ರಕರಣದಲ್ಲಿ ಜಾಮೀನು ನೀಡುವಂತೆ ಕೋರ್ಟ್ ಮೊರೆ ಹೋಗಿದ್ದಾರೆ.ಆದರೆ ಜಾಮೀನು ಪಡೆದಿರುವ ನಟ ಶಸ್ತ್ರಚಿಕಿತ್ಸೆಗೆ ಒಳಗಾಗಿಲ್ಲ ಎನ್ನುವ ಕಾರಣಕ್ಕೆ ಸಾಕಷ್ಟು ಟೀಕೆಗಳು ವ್ಯಕ್ತವಾಗಿತ್ತು. ಸದ್ಯ, ದರ್ಶನ್ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮತ್ತೆ ದರ್ಶನ್ ಜೈಲಿಗೆ!
ತುರ್ತು ಶಸ್ತ್ರಚಿಕಿತ್ಸೆಗಾಗಿ ಹೈಕೋರ್ಟ್ ನಟ ದರ್ಶನ್ ಅವರಿಗೆ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಸದ್ಯ, ದರ್ಶನ್ ಜಾಮೀನಿನ ಮೇಲೆ ಹೊರಬಂದು 32 ದಿನಗಳು ಕಳೆದು ಹೋಗಿವೆ. ಇನ್ನು 9 ದಿನ ಕಳೆದರೆ ಮತ್ತೆ ದರ್ಶನ್ ಜೈಲು ಸೇರಬೇಕಾಗಿದೆ. ಈ ನಡುವೆ ಯಾವೆಲ್ಲ ಬೆಳವಣಿಗಳು ಆಗಲಿವೆ ಎಂಬುದನ್ನು ಕಾದು ನೋಡಬೇಕಾಗಿದೆ.