ಉಡುಪಿ, ದ.ಕ: ಫೆಂಗಲ್ ಚಂಡಮಾರುತದ ಪರಿಣಾಮದ ಭಾರೀ ಮಳೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಡಿಸೆಂಬರ್ 3ರಂದು (ಮಂಗಳವಾರ) ಅಂಗನವಾಡಿ, ಶಾಲೆ, ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಮತ್ತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಈ ಆದೇಶವನ್ನು ಹೊರಡಿಸಿದ್ದಾರೆ.
ಅಧಿಕ ಮಳೆಯ ಸಾಧ್ಯತೆಯಿಂದ, ಸಾರ್ವಜನಿಕರಿಗೆ ಎಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ, ಮತ್ತು ಅತೀ ಅಗತ್ಯವಿದ್ದಲ್ಲಿ ಮಾತ್ರ ಹೊರಗಿಳಿಯ ಬೇಕೆಂದು ಮನವಿ ಮಾಡಲಾಗಿದೆ