ಕಲ್ಲಡ್ಕ: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ಮೇಲಿನ ದೌರ್ಜನ್ಯ ಹಾಗೂ ದೇವಸ್ಥಾನಗಳ ಧ್ವಂಸಕ್ಕೆ ಸಂಬಂಧಿಸಿದ ಘಟನೆಯನ್ನು ಸನಾತನ ಇಂದು ಜಾತ್ರಾ ವ್ಯಾಪಾರಸ್ಥರ ಸಂಘ ಕಲ್ಲಡ್ಕ ತೀವ್ರವಾಗಿ ಖಂಡಿಸುತ್ತದೆ. ಹಾಗೆಯೇ ದಿನಾಂಕ 4.12.24 ರಂದು ನಡೆಯಲಿರುವ ಬೃಹತ್ ಪ್ರತಿಭಟನೆಗೆ ನಮ್ಮ ಸಂಘದ ಸಂಪೂರ್ಣ ಬೆಂಬಲ ಇದೆ ಎಂದು ಸಂಘದ ಅಧ್ಯಕ್ಷರು ತಿಳಿಸಿದರು.
ಸಂಘದ ಅಧ್ಯಕ್ಷರಾದ ಜಯರಾಮ್ ಶೆಟ್ಟಿಗಾರ್ ಕಲ್ಲಡ್ಕ ಅವರು 4.12.2024 ರಂದು ನಡೆಯುವ ಈ ಬೃಹತ್ ಪ್ರತಿಭಟನೆಗೆ ಈ ಸಂಘದ ಎಲ್ಲಾ ಜಿಲ್ಲೆಗಳಲ್ಲಿರುವ ಸದಸ್ಯರು ಸಂಪೂರ್ಣವಾಗಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು.