ಮಂಗಳೂರು:ಹಿಂದೂ ಹಿತರಕ್ಷಣಾ ಸಮಿತಿ ಮಂಗಳೂರು ಇದರ ವತಿಯಿಂದ ಡಿ.4 ರಂದು ಮಂಗಳೂರಿನಲ್ಲಿ ನಡೆಯಲಿರುವ ಬಾಂಗ್ಲಾ ಸರಕಾರದ ವಿರುದ್ದದ ಬೃಹತ್ ಪ್ರತಿಭಟನೆಗೆ ಹಿಂದೂ ಯುವ ಸೇನೆ ಕೇಂದ್ರೀಯ ಮಂಡಳಿಯ ಸಂಪೂರ್ಣ ಬೆಂಬಲವಿದೆ ಎಂದು ತಿಳಿಸಿದ್ದಾರೆ.
ಬಾಂಗ್ಲಾದೇಶದಲ್ಲಿ ನಡೆಯುವ ಹಿಂದೂಗಳ ಮೇಲಿನ ದೌರ್ಜನ್ಯ ಹಾಗೂ ಹಿಂದೂ ದೇವಸ್ಥಾನದ ಮೇಲಿನ ಅಕ್ರಮದ ವಿರುದ್ದ ನಡೆಯುವ ಪ್ರತಿಭಟನೆ ಮೆರವಣಿಗೆಯಲ್ಲಿ ಹಿಂದೂ ಯುವ ಸೇನೆಯ ಎಲ್ಲಾ ಶಾಖೆಗಳ ಕಾರ್ಯಕರ್ತರು ಭಾಗವಹಿಸಬೇಕಾಗಿ ಕೇಂದ್ರೀಯ ಮಂಡಳಿಯ ಗೌರವಾಧ್ಯಕ್ಷರಾದ ಭಾಸ್ಕರಚಂದ್ರ ಶೆಟ್ಟಿ, ಅಧ್ಯಕ್ಷ ಯಶೋಧರ ಚೌಟ, ಪ್ರಧಾನ ಕಾರ್ಯದರ್ಶಿ ಪದ್ಮನಾಭ ನಾವೂರು, ಜಿಲ್ಲಾಧ್ಯಕ್ಷ ವೀರಪ್ಪ ಮೂಡುಶೆಡ್ಡೆ ತಿಳಿಸಿದ್ದಾರೆ.