ನೆಕ್ಕಿಲಾಡಿ: ರಾಜ್ಯ ಹೆದ್ದಾರಿ ಕಾಮಗಾರಿ ವಿಳಂಬ ಖಂಡಿಸಿ ಬಿಜೆಪಿ ಪ್ರತಿಭಟನೆ!!!!!

  • 04 Dec 2024 02:52:32 PM

ನೆಕ್ಕಿಲಾಡಿ: ಪುತ್ತೂರು-ಉಪ್ಪಿನಂಗಡಿ-ಗುರುವಾಯನಕೆರೆ ರಾಜ್ಯ ಹೆದ್ದಾರಿಯ 34 ನೆಕ್ಕಿಲಾಡಿ ಭಾಗದ ರಸ್ತೆಯ ಕಾಮಗಾರಿಕೆಯ ವಿಳಂಬವನ್ನು ಖಂಡಿಸಿ 34 ನೆಕ್ಕಿಲಾಡಿ ಶಕ್ತಿ ಕೇಂದ್ರದ ನೇತೃತ್ವದಲ್ಲಿ ಆದರ್ಶನಗರದಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಯಿತು.

 

 ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ, ಮಾಜಿ ಶಾಸಕರಾದ ಸಂಜೀವ ಮಠಂದೂರ್, ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ನೆಕ್ಕಿಲಾಡಿ, ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಅನಿಲ್ ತೆಂಕಿಲ ಸೇರಿದಂತೆ ಹಲವಾರು ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ಕಾಮಗಾರಿ ವಿಳಂಬದ ಕುರಿತಾಗಿ ತೀವ್ರ ಆಕ್ರೋಶವನ್ನು ವ್ಯಕ್ತಪಡಿಸಿದರು.

 

ಕಾಮಗಾರಿ ವಿಳಂಬದಿಂದ ಸಾರ್ವಜನಿಕರು ಎದುರಿಸುತ್ತಿರುವ ತೊಂದರೆಗಳನ್ನು ಸರ್ಕಾರದ ಗಮನಕ್ಕೆ ತರಬೇಕೆಂದು ಒತ್ತಿಹೇಳಲಾಯಿತು. 

 

ಸಂಬಂಧಪಟ್ಟ ಇಲಾಖೆಗಳು ಹೆದ್ದಾರಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಬೇಕು ಎಂಬುದು ಪ್ರತಿಭಟನೆಯ ಮುಖ್ಯ ಉದ್ದೇಶವಾಗಿದೆಯೆಂದೂ ಈ ಸಮಸ್ಯೆಗೆ ತಕ್ಷಣದ ಪರಿಹಾರವನ್ನು ಮಾಡಿಕೊಡಬೇಕೆಂದು ಸರಕಾರವನ್ನು ಒತ್ತಾಯಿಸಿದರು.