ದ.ಕ: ಕಲಿತ ವಿದ್ಯೆಗೆ ತಕ್ಕ ಉದ್ಯೋಗ ಸಿಗದೆ ಅಲೆದಾಡುವ ವಿದ್ಯಾವಂತರ ಸಂಖ್ಯೆ ದಿನೇ ದಿನೆ ಹೆಚ್ಚುತ್ತಿದೆ. ಸದ್ಯ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬರೋಬ್ಬರಿ 70,000 ಸಾವಿರ ವೇತನದೊಂದಿಗೆ ಭರ್ಜರಿ ಉದ್ಯೋಗಾವಕಾಶಕ್ಕೆ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಹಾಗಿದ್ರೆ ಇದು ಯಾವ ಕೆಲಸ?, ವಿದ್ಯಾರ್ಹತೆ ಏನು?, ಅರ್ಜಿ ಸಲ್ಲಿಕೆ ಹೇಗೆ? ಇತ್ಯಾದಿ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ.
ಯಾವ ಕೆಲಸ ಖಾಲಿ ಇದೆ?
ಮಂಗಳೂರಿನಲ್ಲಿರುವ ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾನೂನು ಸಲಹೆಗಾರ ಹುದ್ದೆ ಖಾಲಿ ಇದ್ದು ಆಸಕ್ತಿಕರ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹತೆಗಳೇನು?
ಈ ಹುದ್ದೆಗೆ ಅರ್ಜಿ ಸಲ್ಲಿಸುವವರು ಕಾನೂನು ಪದವಿ ಪಡೆದಿರಬೇಕು.ಅಷ್ಟೇ ಅಲ್ಲದೆ ಜಿಲ್ಲಾಧಿಕಾರಿಗಳ ಕಚೇರಿಗೆ ಸಂಬಂಧಿಸಿದ ಭೂ ಕಂದಾಯ, ಭೂ ಮಂಜೂರಾತಿ, ಭೂ ಸುಧಾರಣಾ, ಭೂಸ್ವಾಧೀನ ಕಾಯ್ದೆ, ಇನ್ನಿತರ ಕಾಯ್ದೆಯ ಬಗ್ಗೆ ನಿಖರವಾದ ಜ್ಞಾನವಿರಬೇಕು. ಈ ಎಲ್ಲಾ ವ್ಯಾಜ್ಯಗಳ ಬಗ್ಗೆ ಕಾನೂನಾತ್ಮಕವಾಗಿ ಸಲಹೆ ನೀಡಲು ಅರ್ಹತೆ ಹೊಂದಿರಬೇಕು. ಈ ಹುದ್ದೆಗೆ ನಿವೃತ್ತ ನ್ಯಾಯಧೀಶರು, ನಿವೃತ್ತ ಕಂದಾಯ ಇಲಾಖೆಯ ಅಧಿಕಾರಿಗಳಿಂದಲೂ ಕೂಡಾ ಅರ್ಜಿ ಆಹ್ವಾನಿಸಲಾಗುತ್ತದೆ.
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು:-
ಅರ್ಹ ಅಭ್ಯರ್ಥಿಗಳು ಬಯೋಡೇಟಾ ಮತ್ತು ಸೂಕ್ತ ದಾಖಲೆಗಳೊಂದಿಗೆ ಮಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿ.20ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾಧಿಕಾರಿ ಕಚೇರಿ, ಬಂದರ್ ರಸ್ತೆ, ಮಂಗಳೂರು ಇಲ್ಲಿಗೆ ಭೇಟಿ ನೀಡಿ ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.