ಬೆಳ್ತಂಗಡಿ : ಡಿಸೆಂಬರ್ 9 ರಂದು ಬೆಳ್ತಂಗಡಿಯ ಕೊಯ್ಯೂರಿನಲ್ಲಿನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಹಿಂಬಾಲಿಸಿಕೊಂಡು ಬಂದು ಬೆದರಿಸಿ ಚಿನ್ನದ ಕರಿಮಣಿ ಸರವನ್ನು ಎಳೆದು ಪರಾರಿಯಾಗಿರುವ ಘಟನೆ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಕೋರಿಯಾರ್ ನಿವಾಸಿ ದಾಮೋಧರ್ ಭಟ್ ಅವರ ಪತ್ನಿ ರಾಜೀವಿ(50) ಎಂಬವರು ಡಿ.9 ರಂದು ಮಧ್ಯಾಹ್ನ 2:35 ರ ಸುಮಾರಿಗೆ ಬೆಳ್ತಂಗಡಿಗೆ ಹೋಗಿ ವಾಪಸ್ ಮನೆಗೆ ಹೋಗುತ್ತಿರುವ ವೇಳೆಯಲ್ಲಿ ಈ ಘಟನೆ ನಡೆದಿದೆ. ಕೊಯ್ಯೂರು ಗ್ರಾಮದ ಪಾಂಬೇಲ್ ಕ್ರಾಸ್ ನಲ್ಲಿ ಇಳಿದು ಮನೆಗೆ ಮಣ್ಣು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಆರೋಪಿ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ನಿವಾಸಿ ಉಮೇಶ್ ಎಂಬಾತ ಹಿಂದಿನಿಂದ ಓಡಿ ಬಂದು ಮಹಿಳೆಯ ಕುತ್ತಿಗೆಯನ್ನು ಬಿಗಿಯಾಗಿ ಹಿಡಿದು ಬೊಬ್ಬೆ ಹಾಕಬೇಡಿ ಎಂದು ಬೆದರಿಸಿ ಕುತ್ತಿಗೆಯಲ್ಲಿದ್ದ 32 ಗ್ರಾಂ ಚಿನ್ನದ ಕರಿಮಣಿ ಸರವನ್ನು ಎಳೆದನೆಂದು ಬೊಬ್ಬೆ ಹಾಕಿದಾಗ ಕರಿಮಣಿ ಎಳೆದ ರಭಸಕ್ಕೆ ಕುತ್ತಿಗೆ ,ಎದೆಗೆ ಗಾಯವಾಗಿ ಕರಿಮಣಿ ಎರಡು ಭಾಗವಾಯಿತು. ಒಂದು ತುಂಡು ಕರಿಮಣಿಯನ್ನು ಆರೋಪಿ ಉಮೇಶ್ ಗೌಡ ಹಿಡಿದು ಗುಡ್ಡದ ಕಡೆ ಓಡಿ ಪರಾರಿಯಾಗಿದ್ದಾನೆ. ಎಂದು ತಿಳಿದುಬಂದಿದೆ.
ಈ ವೇಳೆಯಲ್ಲಿ ಗಾಯಗೊಂಡ ರಾಜೀವಿ ಮಹಿಳೆ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಸುಮಾರು ಒಂದು ಲಕ್ಷ ಮೌಲ್ಯದ 16 ಗ್ರಾಂ ಚಿನ್ನ ಕಳ್ಳತನ ಮಾಡಿರುವ ಬಗ್ಗೆ 309(6)BNS ಅಡಿಯಲ್ಲಿ ಆರೋಪಿ ಉಮೇಶ್ ಗೌಡ ವಿರುದ್ಧ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ನೇತೃತ್ವದ ವಿಶೇಷ ತಂಡವು ಆರೋಪಿಯ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.