ಪಂಚಮಸಾಲಿ ಸಮುದಾಯದ ಹೋರಾಟಗಾರರ ಮೇಲೆ ಲಾಠಿ ಚಾರ್ಜ್;ಸರಕಾರದ ವಿರುದ್ಧ ಮೃತ್ಯುಂಜಯ ಸ್ವಾಮೀಜಿ ಆಕ್ರೋಶ!

  • 10 Dec 2024 10:04:36 PM

ಬೆಳಗಾವಿ: ಸುವರ್ಣ ಸೌಧ ಬಳಿ 2ಎ ಮೀಸಲಾತಿಗಾಗಿ ಮುತ್ತಿಗೆ ಪ್ರಯತ್ನ ನಡೆಸಿದ ಪಂಚಮಸಾಲಿ ಸಮುದಾಯದ ಹೋರಾಟಗಾರರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದು, ಪರಿಸ್ಥಿತಿ ಕೈಮೀರಿ ಹೋಗಿದೆ . ಲಾಠಿಚಾರ್ಜ್‌ ನಡೆಸಿದ್ದರಿಂದ ಆಕ್ರೋಶಗೊಂಡ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದರು.

 

ಹದಗೆಟ್ಟ ಪರಿಸ್ಥಿಯಲ್ಲಿ ಪೊಲೀಸರು ಹೋರಾಟಗಾರರ ಮೇಲೆ ಮತ್ತಷ್ಟು ಲಾಠಿಚಾರ್ಜ್ ಮಾಡಿದ್ದರಿಂದ ಹಲವರು ಗಾಯಗೊಂಡಿದ್ದಾರೆ. ಈ ಘಟನೆಯನ್ನು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ತೀವ್ರವಾಗಿ ಖಂಡಿಸಿ, ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

 

 ಸಮುದಾಯದ ಹಕ್ಕುಗಳನ್ನು ಸಾಧಿಸಲು ಹೋರಾಟ ನಡೆಸುತ್ತಿರುವುದೆಂದು ಈ ರೀತಿಯ ದಮನಕಾರಿ ಕ್ರಮಗಳು ನಮ್ಮ ಹೋರಾಟವನ್ನು ತೊಡಗಿಸಬಲ್ಲದು, ಎಂದು ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.