ಮತ್ತೆ ಅಬ್ಬರಿಸಲು ಸಜ್ಜಾದ ಸೈಕ್ಲೋನ್!; ಈ ಏಳು ಜಿಲ್ಲೆಗೆ ಯೆಲ್ಲೋ ಅಲರ್ಟ್!

  • 12 Dec 2024 05:39:16 PM

ಫೆಂಗಲ್ ಚಂಡಮಾರುತದಿಂದ ಈಗಾಗಲೇ ದಕ್ಷಿಣ ಭಾರತದ ರಾಜ್ಯಗಳು ಅನೇಕ ತೊಂದರೆಗಳನ್ನು ಎದುರಿಸುತ್ತಿದೆ‌. ಇದರಿಂದ ಚೇತರಿಸಿಕೊಳ್ಳುವ ಮುನ್ನವೇ ಮತ್ತೊಂದು ಚಂಡಮಾರುತ ಸದ್ದಿಲ್ಲದೆ ತನ್ನ ಶಕ್ತಿ ಪ್ರದರ್ಶನ ಮಾಡಲು ಸಿದ್ಧವಾಗಿದೆ. ರಾಜ್ಯದಲ್ಲಿ ಅನೇಕ ಕಡೆ ಇಂದು ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣವಿದ್ದು ಅಲ್ಲಲ್ಲಿ ಭಾರೀ ಮಳೆ ಕೂಡಾ ಆರಂಭವಾಗಿದೆ. ಇನ್ನೂ ಕೆಲವು ಕಡೆ ಜನಜೀವನ ಅಸ್ತವ್ಯಸ್ತವಾಗಿದೆ. 

 

 

 

ಬಂಗಾಳಕೊಲ್ಲಿಯಲ್ಲಿ ಶುರುವಾಯ್ತು ವಾಯುಭಾರ ಕುಸಿತ...!! 

ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಈಗಾಗಲೇ ವಾಯುಭಾರ ಕುಸಿತ ಉಂಟಾಗಿದ್ದು ಇದರ ಪರಿಣಾಮವಾಗಿ ಹಲವು ರಾಜ್ಯಗಳಲ್ಲಿ ಧಾರಾಕಾರ ಮಳೆಯಾಗಿದೆ. ಈ ಹಿನ್ನೆಲೆ ಈಗಾಗಲೇ ಯೆಲ್ಲೋ ಅಲರ್ಟ್ ಕೂಡಾ ಘೋಷಣೆ ಮಾಡಲಾಗಿದೆ. ಮುಂದಿನ ಇಪ್ಪತ್ನಾಲ್ಕು ಗಂಟೆಗಳಲ್ಲಿ ಕರ್ನಾಟಕ- ತಮಿಳುನಾಡು ಭಾಗದಲ್ಲಿ ಕೂಡಾ ಸೈಕ್ಲೋನ್ ಪ್ರಭಾವ ತೋರಿಬರಲಿದೆ. ಭಾರೀ ಮಳೆಯ ನಿರೀಕ್ಷೆ ಇದ್ದು ಹವಾಮಾನ ಇಲಾಖೆ ಸೂಚನೆಯಂತೆ ಏಳು ರಾಜ್ಯಗಳಿಗೆ ಈಗಾಗಲೇ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. 

 

 

 

ಉಡುಪಿ ಮತ್ತು ದ.ಕ ಜಿಲ್ಲೆಯ ಕೆಲವು ಭಾಗಗಳಲ್ಲಿ ಭಾರೀ ಮಳೆ ಸಾಧ್ಯತೆ..!!

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು, ಕೊಡಗು, ಚಿತ್ರದುರ್ಗ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಭಾರೀ ಮಳೆ ಸಹಿತ ಗುಡುಗು ಕೂಡಾ ಬರುವ ಸಾಧ್ಯತೆ ಇದೆ. ಅಷ್ಟೇ ಅಲ್ಲದೆ ದ.ಕ ಮತ್ತು ಉಡುಪಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಕೂಡಾ ಧಾರಾಕಾರವಾಗಿ ಮಳೆ ಸುರಿಯಲಿದೆ. ಇನ್ನು ಕೆಲವು ಕಡೆ ಶುಷ್ಕ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.