ಶಿವಮೊಗ್ಗ: ಜೋಗ ಜಲಪಾತ ವೀಕ್ಷಣೆಗೆ ಹೋಗಲು ಯೋಜನೆ ಹಾಕಿಕೊಂಡವರು ಗಮನಿಸಬೇಕಾದ ದೊಡ್ಡ ಸುದ್ದಿ!
3 ತಿಂಗಳುಗಳ ಕಾಲ ಜೋಗ ಜಲಪಾತ ಪ್ರವೇಶಕ್ಕೆ ನಿರ್ಭಂದ ಹೇರಲಾಗಿದೆ.
ಜೋಗ ಜಲಪಾತದಲ್ಲಿ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಒದಗಿಸಲು ಮತ್ತು ಸಮಗ್ರ ಅಭಿವೃದ್ಧಿಗಾಗಿ ಯೋಜನೆ ಪ್ರಾರಂಭವಾಗಿದೆ.
ಇದರ ಪ್ರಯುಕ್ತ, ಜನವರಿ 1 ರಿಂದ ಮಾರ್ಚ್ 15 ರವರೆಗೆ ಮೂರು ತಿಂಗಳ ಕಾಲ ಸಾರ್ವಜನಿಕರಿಗೆ ಮತ್ತು ಪ್ರವಾಸಿಗರಿಗೆ ಪ್ರವೇಶವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಕಾಮಗಾರಿ ನಿರ್ವಹಣೆಯ ಸಮಯದಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರ ಸುಗಮ ಸಂಚಾರ ಮತ್ತು ಸುರಕ್ಷತೆಯ ಹಿತ ದೃಷ್ಟಿಯಿಂದ ಇದನ್ನು ಜಾರಿಗೆ ತಂದುಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ,
ಜೋಗ ನಿರ್ವಹಣಾ ಪ್ರಾಧಿಕಾರ ಮತ್ತು ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ತಿಳಿಸಿದ್ದಾರೆ.
ಸಾರ್ವಜನಿಕರು ಮತ್ತು ಪ್ರವಾಸಿಗರಲ್ಲಿ ಈ ಕಾಮಗಾರಿ ಕೆಲಸಗಳು ಪೂರ್ಣವಾಗುವರೆಗೂ ನಿಮ್ಮ ಸಹಕಾರವಿರಬೇಕು ಎಂದೂ ಶೀಘ್ರದಲ್ಲೇ ಅಭಿವೃದ್ಧಿ ಕಾರ್ಯ ಮುಗಿಯಲಿದ್ದು,
ಸುಧಾರಿತ ಸೌಲಭ್ಯಗಳೊಂದಿಗೆ ಜೋಗ ಜಲಪಾತ ಪುನಃ ಪ್ರವಾಸಿಗರನ್ನು ಸ್ವಾಗತಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ.