ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಮಹಾಶ್ರೀ ವಿದ್ಯಾವಾಚಸ್ಪತಿ ಡಾ. ವಿಶ್ವ ಸಂತೋಷ ಭಾರತಿ ಶ್ರೀಪಾದರ ಭೇಟಿ

  • 17 Dec 2024 10:41:30 PM

ಕಾಪು :ಸಂಪೂರ್ಣ ಶಿಲಾಮಯವಾಗಿ ಜೀರ್ಣೋದ್ಧಾರವಾಗುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಇಂದು(17 ಡಿಸೆಂಬರ್ 2024)

 

ರಂದು ಶ್ರೀ ಬಾರ್ಕೂರು ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ವಿದ್ಯಾವಾಚಸ್ಪತಿ ಡಾ. ವಿಶ್ವ ಸಂತೋಷ ಭಾರತಿ ಶ್ರೀಪಾದರು ಭೇಟಿ ನೀಡಿದರು.

 

ದೇವಸ್ಥಾನ ಪ್ರಗತಿಗೆ ಶುಭಾಶಯಗಳನ್ನು ಸಲ್ಲಿಸಿದರು.

 

ಈ ಸಂದರ್ಭದಲ್ಲಿ, ಉಡುಪಿಯ ನಿಕಟಪೂರ್ವ ಶಾಸಕರಾದ ಹಾಗೂ ನವದುರ್ಗಾ ಲೇಖನ ಯಜ್ಞ ಸಮಿತಿ ಅಧ್ಯಕ್ಷರಾದ ಕೆ.

 

ರಘುಪತಿ ಭಟ್ ಅವರು ಶ್ರೀಪಾದರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

 

ಅವರು ದೇವಸ್ಥಾನದ ಪುನರ್‌ನಿರ್ಮಾಣದ ಕುರಿತು ಮಾತಾಡಿ,

 

ಈ ಧಾರ್ಮಿಕ ಕಾರ್ಯವು ಸಮಾಜಕ್ಕೆ ಮಹತ್ವಪೂರ್ಣವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.