ಪುತ್ತೂರ್: ಮಂಗಳೂರು ನಿಂದ ಪುತ್ತೂರಿಗೆ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಬೈಕ್ ನಡುವೆ ಇಂದು ಬೆಳಿಗ್ಗೆ ಸುಮಾರು 11 ಗಂಟೆಗೆ ಪುತ್ತೂರಿನ ಮುರ ಜಂಕ್ಷನ್ ಬಳಿ ಭೀಕರ ಅಪಘಾತ ಸಂಭವಿಸಿದೆ. ಕೆ ಎಸ್ ಆರ್ ಟಿ ಸಿ ಬಸ್ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ, ಸವಾರನಿಗೆ ಗಂಭೀರ ಗಾಯಗಳಾಗಿವೆ.
ಡಿಕ್ಕಿಯ ತೀವ್ರತೆಗೆ ಬೈಕ್ ಸಂಪೂರ್ಣ ಜಖಂಗೊಂಡಿದ್ದು, ಸವಾರನಿಗೆ ತೀವ್ರ ಗಾಯಗಳಾದ ಹಿನ್ನೆಲೆಯಲ್ಲಿ ಅವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ವೈದ್ಯರ ಪ್ರಕಾರ ಗಾಯಾಳುವಿನ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಗಂಭೀರ ಗಾಯಗೊಂಡ ಸವಾರ ಸಾವನ್ನಪ್ಪಿದರೆಂಬ ಮಾಹಿತಿ ಸ್ಥಳೀಯವಾಗಿ ಹರಡುತ್ತಿದ್ದು, ಅದರ ದೃಢೀಕರಣಕ್ಕಾಗಿ ನಿರೀಕ್ಷಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.