ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಸಂವಿಧಾನಿಕ ಪದ ಬಳಕೆ ಪ್ರಕರಣಕ್ಕೆ ಬಿಜೆಪಿ ಎಂಎಲ್ಸಿ ಸಿ.ಟಿ. ರವಿ ಅವರನ್ನು ಹಿರೇಬಾಗೆವಾಡಿ ಪೊಲೀಸರು ಬಂಧಿಸಿದ್ದಾರೆ.
ಸಿ.ಟಿ. ರವಿ ಬಂಧನದ ಸಂದರ್ಭದಲ್ಲಿ ಸ್ಥಳೀಯ ಬಿಜೆಪಿ ಮುಖಂಡರು ಮತ್ತು ಬೆಂಬಲಿಗರು ಸುವರ್ಣ ಸೌಧದ ಪಶ್ಚಿಮ ದ್ವಾರದಲ್ಲಿ ಧರಣಿ ನಡೆಸಿ ಪೋಲಿಸರಿಗೆ ಅಡ್ಡಿಪಡಿಸಿದ್ದಾರೆ.
ಸಿ.ಟಿ. ರವಿಯ ಬಂಧನದ ಸಂಬಂಧ ಹೈಡ್ರಾಮಾ ಸೃಷ್ಟಿಯಾದ ಹಿನ್ನೆಲೆಯಲ್ಲಿ, ಘಟನೆ ಸ್ಥಳದಲ್ಲಿ ಹೆಚ್ಚಿನ ಪೋಲಿಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.