ಮಂಗಳೂರು| 500 ನಕಲಿ ಚಿನ್ನದ ಬಳೆ ಅಡವಿಟ್ಟು 2 ಕೋಟಿ ಸಾಲ ಪಡೆದ ಅಬೂಬಕ್ಕರ್ ಸಿದ್ದೀಕ್!; ಮಹಾನ್ ವಂಚಕನ ಹೆಡೆಮುರಿ ಕಟ್ಟಿದ್ದು ಹೇಗೆ ಗೊತ್ತಾ ಪೊಲೀಸರು?

  • 26 Dec 2024 12:03:22 AM

ಮಂಗಳೂರು: ಇತ್ತೀಚಿನ ದಿನಗಳಲ್ಲಿ ಹಣಕ್ಕಾಗಿ ಜನ ಏನನ್ನು ಬೇಕಾದರೂ ಮಾಡಲು ತಯಾರಿದ್ದಾರೆ. ಹಣದ ಮೂಲಕ್ಕಾಗಿ ತಪ್ಪು ಹಾದಿ ಹಿಡಿಯುತ್ತಾರೆ, ವಂಚಿಸುತ್ತಾರೆ. ಕೊನೆಗೆ ಬ್ಯಾಂಕ್ ನವರನ್ನೂ ಯಾಮಾರಿಸಿ ಹಣ ದೋಚುತ್ತಾರೆ. ಅದೇನೇ ಇರಲಿ. ಇದೀಗ ಮಂಗಳೂರಿನ ಈ ವ್ಯಕ್ತಿ ಹಣಕ್ಕಾಗಿ ಮಾಡಿದ ಖತರ್ನಾಕ್ ಪ್ಲ್ಯಾನ್ ಬಗ್ಗೆ ಕೇಳಿದ್ರೆ ನೀವು ಶಾಕ್ ಆಗೋದು ಗ್ಯಾರಂಟಿ...!

 

ನಕಲಿ 500 ಚಿನ್ನದ ಬಳೆ ಅಡವಿಟ್ಟು ಹಣಕ್ಕೆ ಡಿಮ್ಯಾಂಡ್ ಮಾಡಿದ ಭೂಪ...!!

 

 

ವ್ಯಕ್ತಿಯೋರ್ವ ನಕಲಿ ಚಿನ್ನ ಅಡವಿಟ್ಟು 2 ಕೋಟಿಗೂ ಅಧಿಕ ರೂಪಾಯಿ ಸಾಲ ಪಡೆದು ಮಂಗಳೂರಿನ ಸಮಾಜ ಸೇವಾ ಸಹಕಾರಿ ಸಂಘಕ್ಕೆ ವಂಚಿಸಿರುವ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಈಶ್ವರ ಮಂಗಲ ಗ್ರಾಮದ ಅಬೂಬಕ್ಕರ್ ಸಿದ್ದಿಕ್ ವಂಚಿಸಿದ ಆರೋಪಿಯಾಗಿದ್ದಾನೆ.

 

500 ನಕಲಿ ಚಿನ್ನದ ಬಳೆಗಳನ್ನು ಅಡವಿಟ್ಟು ಅಬೂಬಕ್ಕರ್ ಸಿದ್ದಿಕ್ 2,11,89,800 ರೂ. ಸಾಲ ಪಡೆದು, ಮೋಸ ಮಾಡಿದ್ದಾನೆ. ಹೀಗಾಗಿ, ಅಬೂಬಕ್ಕರ್ ಸಿದ್ದಿಕ್, ಬ್ಯಾಂಕ್ ಆಡಳಿತ ಮಂಡಳಿ ಮತ್ತು ನೌಕರರ ವಿರುದ್ಧ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಪಡೀಲ್ ಶಾಖೆಯಲ್ಲಿ ಕೋಟ್ಯಾಂತರ ರೂ. ಅವ್ಯವಹಾರ ಆರೋಪ...!!

 

ಸಮಾಜ ಸೇವಾ ಸಹಕಾರಿ ಸಂಘ ದ.ಕ ಜಿಲ್ಲೆಯಲ್ಲಿ ಒಟ್ಟು 16 ಶಾಖೆಗಳನ್ನು ಹೊಂದಿದೆ. ಇದೀಗ ಮಂಗಳೂರಿನ ಪಡೀಲ್ನ ಶಾಖೆಯಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರವಾಗಿದೆ ಎಂಬ ಗಂಭೀರ ಆರೋಪವೊಂದು ಕೇಳಿಬಂದಿದೆ.

 

ಚಿನ್ನ ಪರೀಕ್ಷೆ ನಡೆಸುವ ಸರಪ, ಬ್ಯಾಂಕ್ನ ಅಧ್ಯಕ್ಷ, ನಿರ್ದೇಶಕರು ಮ್ಯಾನೇಜರ್, ಸಿಬ್ಬಂದಿ ಸಹಕಾರದಿಂದ ಅವ್ಯವಹಾರ ನಡೆದಿದೆ. ಕೋಟ್ಯಾಂತರ ರೂಪಾಯಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಈ ಬಗ್ಗೆ ಬ್ಯಾಂಕ್ನ ಸದಸ್ಯರು, ಮಾಜಿ ನಿರ್ದೇಶಕ ಡಿ.ಲೋಕನಾಥ್ ಅವರು ದೂರು ನೀಡಿದ್ದರು.

 

ದೂರಿನ ಮೇರೆಗೆ 28 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಬ್ಯಾಂಕ್ನ ಸರಪ ವಿವೇಕ್ ಆಚಾರ್ಯನನ್ನು ಬಂಧಿಸಲಾಗಿದೆ. ತಲೆಮರೆಸಿಕೊಂಡಿರುವ ಆರೋಪಿ ಅಬೂಬಕ್ಕರ್ ಸಿದ್ದಿಕ್ಗಾಗಿ ಶೋಧ ಕಾರ್ಯ ಮುಂದುವರೆದಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.