ದೆಹಲಿ: ಭಾರತದ ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ (92) ಡಿಸೆಂಬರ್ 26 ಗುರುವಾರ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದ ಹಿನ್ನಲೆಯಲ್ಲಿ ಕರ್ನಾಟಕ ಸರ್ಕಾರ ಡಿಸೆಂಬರ್ 27 ರಂದು ಸರ್ಕಾರಿ ರಜೆಯನ್ನ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳು, ಬ್ಯಾಂಕ್‌ಗಳು ಹಾಗೂ ಎಲ್ಲಾ ಸರ್ಕಾರಿ ಕಚೇರಿಗಳು ನಾಳೆ ಕಾರ್ಯ ನಿರ್ವಹಿಸುವುದಿಲ್ಲ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಮಾಜಿ ಪ್ರಧಾನಿ ಅವರ ನಿಧನದ ಗೌರವಾರ್ಥವಾಗಿ ರಾಜ್ಯದಲ್ಲಿ ಏಳು ದಿನಗಳ ಕಾಲ ಶೋಕಾಚರಣೆಯನ್ನ ಘೋಷಿಸಲಾಗಿದೆ.
ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ನಿನ್ನೆ ಸಂಜೆ 8.06ಕ್ಕೆ ಆಸ್ಪತ್ರೆಗೆ ದಾಖಲಾಗಿದ್ದು, ರಾತ್ರಿ 9.51ಕ್ಕೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ್ದಾರೆ ಎಂದು ದೆಹಲಿಯ ಏಮ್ಸ್ ಹಾಸ್ಪಿಟಲ್ ನ ಬುಲೆಟಿನ್ ಅಲ್ಲಿ ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಇಂದು ನಡೆಯಲಿರುವ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದುಗೊಳಿಸಿ 7 ದಿನಗಳ ಕಾಲ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದೆ.