ಮಂಗಳೂರು| ಮಂಗಳೂರಿನಲ್ಲಿ ಅಗತ್ಯವಾಗಿ ಎನ್ಐಎ ಘಟಕ ಸ್ಥಾಪಿಸಲೇಬೇಕು- ದ.ಕ ಅಭಿವೃದ್ಧಿ ಕುರಿತು ಅಮಿತ್ ಷಾ ಜೊತೆ ಮನವಿ ಮಾಡಿದ ಸಂಸದ ಚೌಟ..!

  • 04 Jan 2025 03:57:10 PM

ಮಂಗಳೂರು: ಬೆಳ್ಳಾರೆಯಲ್ಲಿ ಹಿಂದೂ ಮುಖಂಡ ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ ನಡೆದ ಸಂದರ್ಭ ಮಂಗಳೂರಿನಲ್ಲಿ ಎನ್ಐಎ ಘಟಕ ಸ್ಥಾಪನೆಯಾಗಲೇಬೇಕು ಎಂಬ ಒಕ್ಕೊರಲ ಒತ್ತಾಯವಿತ್ತು. ಆದರೆ ಮತ್ತೆ ರಾಜಕೀಯ ಮುಖಂಡರು, ಪೊಲೀಸ್ ಇಲಾಖೆ ಈ ಬಗ್ಗೆ ಗಮನ ಕೊಟ್ಟದ್ದು ಕಡಿಮೆ. ಕೋಮುಸೂಕ್ಷ್ಮ ಪ್ರದೇಶವಾಗಿರುವ ದ.ಕ ಜಿಲ್ಲೆಯಲ್ಲಿರುವ ಧರ್ಮ ಸಂಘರ್ಷ ನಡೆಯುತ್ತಲೇ ಇರುತ್ತದೆ.

 

ಇಲ್ಲಿ ಕಾನೂನಿನ ಮಿತಿ ಮೀರಿ ಕಾನೂನುಉಲ್ಲಂಘಿತ ಕೃತ್ಯಗಳು ನಡೆಯದಂತೆ ಎಚ್ಚರ ವಹಿಸುವುದು ನಮ್ಮ ಕರ್ತವ್ಯ. ಆದ್ದರಿಂದ ದ.ಕ ಸಂಸದ ಬ್ರಿಜೇಶ್ ಚೌಟ ಅವರು ಕೇಂದ್ರ ಗ್ರಹ ಸಚಿವರಿಗೆ ವಿಶೇಷವಾದ ಮನವಿಯನ್ನು ಸಲ್ಲಿಸಿದ್ದಾರೆ.

 

ಉಗ್ರ ಚಟುವಟಿಕೆ ನಿಗ್ರಹಕ್ಕೆ ದ.ಕ ಜಿಲ್ಲೆಯಲ್ಲಿ ಎನ್ಐಎ ಘಟಕ ಸ್ಥಾಪಿಸಬೇಕು- ಸಂಸದ ಚೌಟ..!

 

ಉಗ್ರ ಚಟುವಟಿಕೆ ನಿಗ್ರಹಕ್ಕೆ ಮಂಗಳೂರಿನಲ್ಲಿ ಆದಷ್ಟು ಶೀಘ್ರವಾಗಿ ರಾಷ್ಟ್ರೀಯ ತನಿಖಾ ದಳ ಘಟಕ ಸ್ಥಾಪಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ದೆಹಲಿಯಲ್ಲಿ ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ.

 

ಸಂಸದರಾದ ಬಳಿಕ ಜಿಲ್ಲೆಯ ಅಭಿವೃದ್ಧಿ ವಿಚಾರವಾಗಿ ಮೊದಲ ಬಾರಿಗೆ ಅಧಿಕೃತವಾಗಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಶುಕ್ರವಾರ ಸಂಜೆ ಭೇಟಿ ಮಾಡಿದ ಸಂಸದ ಕ್ಯಾಪ್ಟನ್ ಚೌಟ ಅವರು ಜಿಲ್ಲೆಯ ಪ್ರಗತಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಮಲೋಚಿಸಿದ್ದು ಈ ವೇಳೆ ಗೃಹಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಆದಷ್ಟು ಬೇಗ ಅದಕ್ಕೆ ಸಂಬಂಧಿಸಿದಂತಹ ಕಾರ್ಯಯೋಜನೆಗಳನ್ನು ಪ್ರಾರಂಭಿಸಲಾಗುವುದು ಎಂದು ಹೇಳಿದ್ದಾರೆ. 

 

ಅಮಿತ್ ಷಾ ಎದುರು ಅನೇಕ ಬೇಡಿಕೆಗಳನ್ನಿಟ್ಟ ಸಂಸದ ಬ್ರಿಜೇಶ್ ಚೌಟ..!!

 

ಕರಾವಳಿ ತೀರದ ಸುರಕ್ಷತೆ ದೃಷ್ಟಿಯಿಂದ ಭಾರತೀಯ ಕೋಸ್ಟ್‌ಗಾರ್ಡ್‌ ಅಕಾಡೆಮಿ ಸ್ಥಾಪನೆ ಯೋಜನೆ ಅನುಷ್ಠಾನ, ದಕ್ಷಿಣ ಕನ್ನಡದಲ್ಲಿ ಸೈನಿಕ ಶಾಲೆ-ಮಿಲಿಟರಿ ನೆಲೆ ಸ್ಥಾಪಿಸುವುದು, ಮಂಗಳೂರು-ಬೆಂಗಳೂರು ನಡುವಿನ ರೈಲು ಹಾಗೂ ರಸ್ತೆ ಸಂಪರ್ಕ ಮತ್ತಷ್ಟು ಸುಗಮಗೊಳಿಸುವುದು ಇತ್ಯಾದಿ ಸೇರಿ ದಕ್ಷಿಣ ಕನ್ನಡ ಜಿಲ್ಲೆ ಸಮಗ್ರ ಅಭಿವೃದ್ಧಿ ಹಾಗೂ ಸುರಕ್ಷತೆ ಮತ್ತು ಭದ್ರತೆ ಹೆಚ್ಚಳಕ್ಕೆ ಪೂರಕವಾದ ಹಲವು ಪ್ರಮುಖ ಬೇಡಿಕೆಗಳನ್ನು ಅವರ ಮುಂದಿಟ್ಟಿದ್ದಾರೆ.

 

ಈ ಎಲ್ಲಾ ಮನವಿಯನ್ನು ಒಳಗೊಂಡ ಪತ್ರಗಳನ್ನು ಸಂಸದ ಕ್ಯಾ. ಚೌಟ ಅವರು ಅಮಿತ್‌ ಶಾ ಅವರಿಗೆ ಸಲ್ಲಿಕೆ ಮಾಡಿದ್ದಾರೆ. ಒಟ್ಟಾರೆಯಾಗಿ ದ.ಕ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿರುವ ಸಂಸದ ಬ್ರಿಜೇಶ್ ಚೌಟ ಅವರ ಕಾರ್ಯವೈಖರಿಗೆ ಸಾರ್ವಜನಿಕರಿಂದ ಶ್ಲಾಘನೆ ವ್ಯಕ್ತವಾಗಿದೆ.