ಹಿಂದೂ ಯುವತಿಗೆ ಬೆದರಿಕೆ ಅಶ್ಲೀಲ ಕೃತ್ಯಕ್ಕೆ ಒತ್ತಾಯ. ಯುವತಿಯನ್ನು 24ತುಂಡು ಮಾಡ್ತೇನೆ ಎಂದು ಅನ್ಯ ಮತೀಯ ಯುವಕನ ಬೆದರಿಕೆ... ಆತ್ಮಹತ್ಯೆಗೆ ಯತ್ನಿಸಿದ ಹಿಂದೂ ಯುವತಿ ??

  • 25 Oct 2024 09:57:38 PM

ಸುರತ್ಕಲ್ : “ನನ್ನ ಜತೆ ದೈಹಿಕವಾಗಿ ಒಪ್ಪಿ ಸಹಕರಿಸದಿದ್ದರೆ , ಇಲ್ಲಾಂದ್ರೆ 24 ತುಂಡು ಮಾಡುವೆ” ಎಂದು ಹತ್ಯೆ ಬೆದರಿಕೆ ಅಲ್ಲದೆ ಅಸಭ್ಯ, ಅಶ್ಲೀಲ ಸಂದೇಶ ಕಳುಹಿಸಿದ ಮುಸ್ಲಿಂ ಜಿಹಾದಿಯ ನಿರಂತರ ಕಿರುಕುಳದಿಂದ ಮತ್ತು ಕೊಲೆ ಬೆದರಿಕೆಯಿಂದ ಬೇಸತ್ತ ಯುವತಿ ಆತ್ಮಹತ್ಯೆ ಯತ್ನಿಸಿದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್‌ನಲ್ಲಿ ನಡೆದಿದೆ.

ಯುವತಿಗೆ ಬೆದರಿಕೆ ಮತ್ತು ಅಸಭ್ಯ, ಅಶ್ಲೀಲ ಸಂದೇಶ ಕಳುಹಿಸಿದ ಮತಾಂಧರನ್ನು ಸುರತ್ಕಲ್ ಇಡ್ಯಾದ ಸದಾಶಿವನಗರದ ನಿವಾಸಿ ಅನ್ಯಮತೀಯ ಯುವಕರಾದ ಶಾರಿಕ್ ಹಾಗೂ ನೂರ್‌ಜಹಾನ್ ಎಂಬ ಕಾಮಾಂಧರು ಹಿಂದೂ ಯುವತಿಗೆ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಸದ್ಯ ಪೊಲೀಸರು ಓರ್ವನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.


ಈತ ಯುವತಿಯ ಫೇಸ್‌ಬುಕ್ ಖಾತೆ ಹ್ಯಾಕ್ ಮಾಡಿ ಆಕೆಯ ಸಹೋದರನಿಗೆ ಅಶ್ಲೀಲವಾಗಿ ಸಂದೇಶ ಕಳುಹಿಸುತ್ತಿದ್ದಲ್ಲದೆ ಬೆದರಿಕೆಯೊಡ್ಡಿದ್ದ. ಅಲ್ಲದೆ ಯುವತಿಯ ಸಹೋದರನಿಗೆ ವಾಟ್ಸ್ ಆಪ್ ಮೆಸೇಜ್ ಮಾಡಿ ಧಮ್ಕಿ ಹಾಕಿದ್ದ ಎನ್ನಲಾಗಿದೆ. ಇವರ ನಿರಂತರ ಕಿರುಕುಳದಿಂದ ಬೇಸತ್ತು ಯುವತಿ ಆತ್ಮಹತ್ಯೆ ಯತ್ನಿಸಿದ್ದಾಳೆ.

ಈ ಹಿಂದೆಯೇ ಆತನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ್ದರು. ವಿಚಾರಣೆ ವೇಳೆ ಸಾಕ್ಷ್ಯ ಸಿಗದ ಹಿನ್ನೆಲೆಯಲ್ಲಿ ಆತನನ್ನು ಬಿಡುಗಡೆ ಮಾಡಲಾಗಿತ್ತು. ಆ ಬಳಿಕವೂ ನಿರಂತರ ಮೆಸೇಜ್ ಹಿನ್ನೆಲೆಯಲ್ಲಿ ಮನನೊಂದ ಯುವತಿ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಆತ್ಮಹತ್ಯೆ ಯತ್ನಕ್ಕೆ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದಳು.

“ಒಬ್ಬ ಅನ್ಯಮತೀಯನ ಕೈಯ್ಯಲ್ಲಿ ಅತ್ಯಾಚಾರವಾಗಿ ಸಾಯುವ ಬದಲು ಈಗಲೇ ಸಾಯ್ತನೆ”. ಆದರೆ ಶಾರೀಕ್ ಹಾಗೂ ನೂರ್ಜಾನ್ ಇಬ್ಬರನ್ನು ಬಿಡಬಾರದು ಎಂದು ಡೆತ್ ನೋಟ್ ನಲ್ಲಿ ಹೆಸರು ಉಲ್ಲೇಖಿಸಿ ಆತ್ಮಹತ್ಯೆ ಯತ್ನಿಸಿದ್ದಾಳೆ ಎಂದು ತಿಳಿದುಬಂದಿದೆ.