ಮಂಗಳೂರು: ಬಾಲಕಿಯೊಬ್ಬಳು ಸ್ನಾನ ಮಾಡುತ್ತಿದ್ದಾಗ ವಿಡಿಯೋ ಚಿತ್ರೀಕರಣ ಮಾಡಿದ ಯುವಕನಿಗೆ ಮಂಗಳೂರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕಠಿಣ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.
2024ರ ಮಾ.10 ರಂದು ನಗರದ ಬಜಪೆ ವ್ಯಾಪ್ತಿಯಲ್ಲಿ ಆರೋಪಿ ಗಗನ್(24) ಮನೆಯೊಂದರ ಕಾಂಪೌಂಡ್ ಹತ್ತಿ ಬಾತ್ ರೂಮ್ ನಲ್ಲಿ ಬಾಲಕಿ ಸ್ನಾನ ಮಾಡುತ್ತಿದ್ದಾಗ ಅದನ್ನು ವಿಡಿಯೋ ಮಾಡಿದ್ದ, ಈ ಬಗ್ಗೆ ಪ್ರಕರಣವೂ ದಾಖಲಾಗಿತ್ತು.
9 ತಿಂಗಳ ಬಳಿಕ ಆರೋಪಿಗೆ ಶಿಕ್ಷೆ!
ವಿಡಿಯೋ ಚಿತ್ರೀಕರಣ ಮಾಡಿದ್ದ ಆರೋಪಿ ಗಗನ್ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯ ಕೇಳಿ ಬಂದ ಬೆನ್ನಲ್ಲೇ ಅಲರ್ಟ್ ಆದ ಪೊಲೀಸರು ಆತನನ್ನು ಬಂಧಿಸಿದ್ದರು. ಸದ್ಯ, ಪ್ರಕರಣ ದಾಖಲಾದ 9 ತಿಂಗಳ ಬಳಿಕ ಕೋರ್ಟ್ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.
ಆರೋಪಿಗೆ 1 ವರ್ಷ ಜೈಲು ಹಾಗೂ 20 ಸಾವಿರ ದಂಡ ವಿಧಿಸಲಾಗಿದೆ. ಜೊತೆಗೆ ನೊಂದ ಬಾಲಕಿಗೆ 1ಲಕ್ಷ ಪರಿಹಾರ ನೀಡುವಂತೆ ಕೋರ್ಟ್ ಹೇಳಿದೆ.
ಜಾಗೃತಿ ಮೂಡಿಸಿ ಎಂದ ನ್ಯಾಯಾಲಯ!
ಈ ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡು ಕೋರ್ಟ್ ಈ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದೆ. ಬಾತ್ ರೂಮ್ ನಲ್ಲಿ ವಿಡಿಯೋ ಚಿತ್ರೀಕರಿಸಿದ ಬಗ್ಗೆ ಈ ವರೆಗೆ 14 ಪ್ರಕರಣಗಳು ದಾಖಲಾಗಿವೆ .
ಇಂತಹ ಪ್ರಕರಣಗಳಿಗೆ 5-7 ವರ್ಷ ಶಿಕ್ಷೆ ವಿಧಿಸುವ ಅವಕಾಶವಿದೆ. ಆದಷ್ಟು ಬೇಗ ವಿವಿಧ ಕ್ಷೇತ್ರ 6 ಜನ ಸಂಪನ್ಮೂಲ ವ್ಯಕ್ತಿಗಳನ್ನು ಆರಿಸಿ ಇಂತಹ ಘಟನೆಗಳು ಆಗದಂತೆ ಜಾಗೃತಿ ಮೂಡಿಸುವ ಕೆಲಸವನ್ನು ಸರ್ಕಾರ ಮಾಡಬೇಕು' ಎಂದು ಕೋರ್ಟ್ ಆದೇಶಿಸಿದೆ.