ಪುತ್ತೂರು: ಜ.8 ರ ಬೆಳಗ್ಗೆ ಪುತ್ತೂರಿನ ಹೊರ ವಲಯದ ದಾರಂದಕುಕ್ಕು ಕೊಲ್ಯದಲ್ಲಿ ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಕಾಲೇಜು ವಿಧ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.
ಸುಳ್ಯದ ಕೆವಿಜಿ ಪಾಲಿಟೆಕ್ನಿಕ್ ವಿಧ್ಯಾರ್ಥಿಯಾದ ಬೈಕ್ ಸವಾರ ನಿಶಾಂತ್ ಹಾಗೂ ಹಿಂಬದಿ ಸವಾರ ಶ್ರೀ ರಾಮಕೃಷ್ಣ ಪ್ರೌಡ ಶಾಲಾ ವಿದ್ಯಾರ್ಥಿ ಕಾರ್ತಿಕ್ ಗಾಯಗೊಂಡಿರುವ ವಿದ್ಯಾರ್ಥಿಗಳು. ಇಬ್ಬರೂ ಕೂಡ ಬೆಳ್ಳಿಪ್ಪಾಡಿ ನಿವಾಸಿಗಳಾಗಿದ್ದು, ಬೆಳಗ್ಗೆ ಮನೆಯಿಂದ ಕಾಲೇಜಿಗೆ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ಬೆಳ್ಳಿಪ್ಪಾಡಿಯಿಂದ ಈ ಇಬ್ಬರು ವಿದ್ಯಾರ್ಥಿಗಳು ಪುತ್ತೂರಿನಲ್ಲಿರುವ ತಮ್ಮ ಶಾಲೆ ಹಾಗೂ ಕಾಲೇಜಿಗೆ ಬರುತ್ತಿದ್ದಾಗ ಮಂಗಳೂರಿನಿಂದ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಗೆ ಡಿಕ್ಕಿಯಾಗಿದ್ದಾರೆ.
ಅಪಘಾತದಲ್ಲಿ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಸ್ಥಳೀಯರು ಇಬ್ಬರನ್ನು ಹತ್ತಿರದ ಮಹಾವೀರ ಆಸ್ಪತ್ರೆಗೆ ದಾಖಲಿಸಿದ್ದಾರೆ. ವಿದ್ಯಾರ್ಥಿಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ.