ಇತ್ತೀಚಿನ ದಿನಗಳಲ್ಲಿ ಡಿಗ್ರಿ, ಡಬಲ್ ಡಿಗ್ರಿಯನ್ನು ಪೂರೈಸಿದ್ದರೂ ಕೂಡಾ ಪದವೀಧರರು ಉದ್ಯೋಗಕ್ಕಾಗಿ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಅಂತಹ ನಿರುದ್ಯೋಗಿ ಪದವೀಧರರಿಗೆ ಪ್ರತಿಷ್ಟಿತ ಬ್ಯಾಂಕ್ ಗಳಲ್ಲಿ ಒಂದಾಗಿರುವ ಕೆನರಾ ಬ್ಯಾಂಕ್ ಗುಡ್ ನ್ಯೂಸ್ ಒಂದನ್ನು ನೀಡುತ್ತಿದೆ.
ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..!!
ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ ಒಟ್ಟು ಅರವತ್ತು ವಿಶೇಷ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಕೆನರಾ ಬ್ಯಾಂಕ್ ನ ಅಧಿಕೃತ ವೆಬ್ಸೈಟ್ ಮುಖೇನ ಅರ್ಜಿ ಸಲ್ಲಿಸಬಹುದು. ಅರ್ಜಿ ಹಾಕುವಾಗ ವಿದ್ಯಾರ್ಹತೆಯ ಮೂಲ ಆಧಾರ ಮತ್ತು ಉದ್ಯೋಗವನ್ನು ಪಡೆಯಲು ಇರಬೇಕಾದ ಅರ್ಹತೆಗಳನ್ನು ಪರಿಶೀಲಿಸಿ ಅಪ್ಲೈ ಮಾಡಬೇಕು.
ಕೆನರಾ ಬ್ಯಾಂಕ್ ನೇಮಕಾತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಹೇಗೆ..?
ಕೆನರಾ ಬ್ಯಾಂಕ್ ನಲ್ಲಿ ವಿಶೇಷ ಅಧಿಕಾರಿಗಳು ಹುದ್ದೆ ಖಾಲಿ ಇದ್ದು ಪದವಿ, ಬಿಸಿಎ, ಬಿಇ ಅಥವಾ ಬಿಟೆಕ್ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಇದೇ ತಿಂಗಳ ೨೪ ತಾರೀಕಿನ ಒಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಇನ್ನು ಅರ್ಜಿ ಸಲ್ಲಿಸಲು ಪಾಲಿಸಬೇಕಾದ ಪ್ರಕ್ರಿಯೆಗಳೆಂದರೆ:-
* ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿ ತನ್ನದೇ ಆದ ಮೂಲ ಅಧಿಕೃತ ಇಮೇಲ್ ಐಡಿ, ದೂರವಾಣಿ ಸಂಖ್ಯೆ, ಶೈಕ್ಷಣಿಕ ಅರ್ಹತೆಗೆ ಸಂಬಂಧಿಸಿದ ಆಧಾರಗಳು, ರೆಸ್ಯೂಮ್ ಗಳನ್ನು ಸಿದ್ಧಪಡಿಸಿಕೊಂಡು ಇಟ್ಟಿರುವುದು ಉತ್ತಮ.
* ಈ ಬ್ಯಾಂಕ್ ನ ಅಧಿಕೃತ ವೆಬ್ಸೈಟ್ ನಲ್ಲಿ ಇರುವ ಆನ್ಲೈನ್ ಅರ್ಜಿ ನಮೂನೆಯಲ್ಲಿ ನೇಮಕಾತಿ ಕಾಲಮ್ ಗೆ ಕ್ಲಿಕ್ ಮಾಡಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನಮೂದಿಸಿ
* ಅಭ್ಯರ್ಥಿ ಇತ್ತೀಚೆಗೆ ತೆಗೆದ ತನ್ನ ಭಾವಚಿತ್ರ ಸಹಿತ ಸ್ಕ್ಯಾನ್ ಮಾಡಿದ ತನ್ನ ಅಗತ್ಯ ಮೂಲ ಪತ್ರಗಳನ್ನು ಅಪ್ಲೋಡ್ ಮಾಡಬೇಕು.
* ನಿಮ್ಮ ವರ್ಗಕ್ಕೆ ಅನುಸಾರವಾಗಿ ಹೇಳಲಾಗಿರುವ ಅರ್ಜಿ ಶುಲ್ಕ ಪಾವತಿಸಿ ಕೊನೆಯದಾಗಿ `ಸಲ್ಲಿಸು' ಬಟನ್ ಕ್ಲಿಕ್ ಮಾಡಿದರೆ ಅರ್ಜಿ ಸಲ್ಲಿಕೆ ಅಂತಿಮವಾಗುತ್ತದೆ.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಹೆಚ್ಚಿನ ಅವಶ್ಯಕತೆಗೆ ತನ್ನ ಅರ್ಜಿ ಸಂಖ್ಯೆ ಅಥವಾ ವಿನಂತಿ ಸಂಖ್ಯೆಯನ್ನು ಕ್ಯಾಪ್ಚರ್ ಮಾಡಿಟ್ಟುಕೊಳ್ಳುವುದು ಉತ್ತಮ. ಕೆನರಾ ಬ್ಯಾಂಕಿನ ಈ ಉದ್ಯೋಗವನ್ನು ಅರಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಮೊದಲೇ ಅರ್ಜಿ ಸಲ್ಲಿಸುವುದು ಒಳ್ಳೆಯದು. ಏಕೆಂದರೆ ನಂತರ ಬಂದ ಅರ್ಜಿಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದಿಲ್ಲ.