ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ!;ಮಹತ್ವದ ಆದೇಶ ನೀಡಿದ ಕೋರ್ಟ್!

  • 09 Jan 2025 01:44:26 PM

ಬೆಳ್ಳಾರೆ: ಬೆಳ್ಳಾರೆಯ ಹಿಂದೂ ಮುಖಂಡ ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಬಿಜೆಪಿ ಯುವ ಮೋರ್ಚಾ ಮುಖಂಡನನ್ನು ಹತ್ಯೆ ಮಾಡಿದ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ಆಗಲೇಬೇಕು ಎಂದು ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದವು. ಇದೀಗ ಈ ಪ್ರಕರಣ ಹೊಸದೊಂದು ತಿರುವನ್ನು ಪಡೆದುಕೊಂಡಿದೆ. 

 

ಆರೋಪಿಗಳಿಗೆ ಜಾಮೀನು ತಿರಸ್ಕರಿಸಿದ ಸುಪ್ರೀಂ..!

 

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ 21ನೇ ಆರೋಪಿಯಾಗಿರುವ ಮೊಹಮ್ಮದ್ ಜಾಬೀರ್ ಎಂಬಾತನಿಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ‌. ಪುತ್ತೂರಿನ ಒಳಮೊಗ್ರು ಗ್ರಾಮದ ನಿವಾಸಿ ಮೂವತ್ತೆರಡು ವರ್ಷದ ಜಾಬೀರ್ ಜಾಮೀನು ತಿರಸ್ಕೃತಗೊಂಡ ಆರೋಪಿಯಾಗಿದ್ದಾನೆ.

 

ಈತನ ಹಿನ್ನೆಲೆ ಎಂದರೆ ನಿಷೇಧಿತ ಪಿಎಫ್ಐ ಸಂಘಟನೆ ಹಾಗೂ ಎಸ್ಡಿಪಿಐ ಪಕ್ಷದ ಮುಖಂಡನಾಗಿದ್ದ. ಎನ್ಐಎ ನ್ಯಾಯಾಲಯ 2023 ರ ಫೆಬ್ರವರಿ 9ರಂದು ಈತನ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. 

 

ಪ್ರಕರಣದ ವಿಚಾರಣೆ ನಡೆಸಿ ಅರ್ಜಿ ವಜಾಗೊಳಿಸಿದ ನ್ಯಾಯಾಲಯ...!

 

ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಮತ್ತು ನ್ಯಾಯಮೂರ್ತಿ ವಿಜಯ್ ಕುಮಾರ್ ಎ ಪಾಟೀಲ್ ಅವರ ನೇತೃತ್ವದಲ್ಲಿ ಪ್ರಕರಣದ ವಿಚಾರಣೆ ನಡೆಸಿ ವಿಭಾಗೀಯ ಪೀಠ ಅರ್ಜಿ ವಜಾಗೊಳಿಸಿ ಆದೇಶಿಸಿತ್ತು.

 

ಇದರ ನಂತರ ಆರೋಪಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದ. ಆದರೂ ಏನೂ ಪ್ರಯೋಜನವಾಗಲಿಲ್ಲ. ಅಲ್ಲಿಯೂ ಜಾಮೀನು ತಿರಸ್ಕೃತಗೊಂಡಿದೆ.