ತುಮಕೂರು: ಆಧುನಿಕ ತಂತ್ರಜ್ಞಾನಗಳು ಆವಿಷ್ಕಾರಗೊಂಡಂತೆ ಜಗತ್ತು ಶೀಘ್ರಗತಿಯಲ್ಲಿ ಮುಂದುವರೆಯುತ್ತಿದೆ. ಮಕ್ಕಳು ಕೂಡಾ ಅತ್ಯಂತ ಸಣ್ಣ ವಯಸ್ಸಿನಲ್ಲೇ ವಯಸ್ಸಿಗೂ ಮೀರಿ ಪ್ರಬುದ್ಧರಾಗುತ್ತಿದ್ದಾರೆ. ಈಗಿನ ಕಾಲದಲ್ಲಿ ಶಾಲೆ ಕಲಿಯುವ ಮಕ್ಕಳು ಹೆಚ್ಚು ಸೂಕ್ಷ್ಮವಾಗಿರುತ್ತಾರೆ.
ಸಣ್ಣ ಸಣ್ಣ ವಿಷಯಕ್ಕೂ ಧೃತಿಗೆಟ್ಟು ಜೀವನದಲ್ಲಿ ತಪ್ಪು ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ. ಇದೀಗ ಬಿಜೆಪಿ ಕಾರ್ಯಕರ್ತೆಯೊಬ್ಬರ ಮಗನೂ ಕೂಡಾ ದುಡುಕಿನ ನಿರ್ಧಾರವನ್ನು ತೆಗೆದುಕೊಂಡು ಜೀವಾಂತ್ಯಗೊಳಿಸಿದ್ದಾನೆ.
ಕ್ಷುಲ್ಲಕ ಕಾರಣಕ್ಕೆ ಏಳನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ...!
ಕ್ಷುಲ್ಲಕ ಕಾರಣಕ್ಕೆ ಏಳನೇ ತರಗತಿ ಬಾಲಕ ಆತ್ಮಹತ್ಯೆಗೆ ಶರಣಾಗಿರುವ ಅಚ್ಚರಿಕರ ಘಟನೆ ತುಮಕೂರು ನಗರದ ವಿಜಯನಗರ ಎರಡನೇ ಮುಖ್ಯ ರಸ್ತೆಯಲ್ಲಿ ನಡೆದಿದೆ. ತ್ರಿಶಾಲ್ (13) ಮೃತ ಬಾಲಕ. ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತರನಾಗಿರುವ ವಿಶಾಲ್ ಸರ್ವೋದಯ ಶಾಲೆಯಲ್ಲಿ ಏಳನೇ ತರಗತಿ ಓದುತ್ತಿದ್ದ.
ಕಾಂಗ್ರೆಸ್ ಸರ್ಕಾರದ ವಿರುದ್ಧ ಆಗಾಗ ಸಾಮಾಜಿಕ ಜಾಕತಾಣದಲ್ಲಿ ಪೋಸ್ಟ್ ಗಳನ್ನು ಹಾಕಿ ಸುದ್ದಿಯಲ್ಲಿರುತ್ತಾರೆ. ಇವರ ಜೊತೆ ಬಾಡಿಗೆ ಮನೆಯಲ್ಲಿ ವಾಸವಿದ್ದ ಪುತ್ರ ಏಕಾಏಕಿ ದುಡುಕಿನ ನಿರ್ಧಾರಗಳನ್ನು ತೆಗೆದುಕೊಂಡಿದ್ದಾನೆ.
ಪಾರಿವಾಳದ ಬೆಟ್ಟಿಂಗ್ ವಿಚಾರಕ್ಕೆ ಆತ್ಮಹತ್ಯೆ ಮಾಡಿಕೊಂಡ ಬಾಲಕ..!
ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ವಿದ್ಯಾರ್ಥಿ ಶಾಲಾ ಸಮವಸ್ತ್ರದಲ್ಲೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತ್ರಿಶಾಲ್ ಪಾರಿವಾಳದ ಬೆಟ್ಟಿಂಗ್ ವಿಚಾರಕ್ಕೆ ಸ್ನೇಹಿತರ ಜೊತೆ ಗಲಾಟೆ ಮಾಡಿಕೊಂಡಿದ್ದ. ಈ ಹಿನ್ನೆಲೆ ಮನನೊಂದು ದುಡುಕಿನ ನಿರ್ಧಾರ ತೆಗೆದುಕೊಂಡಿದ್ದಾನೆ.
ಆತ್ಮಹತ್ಯೆಗೂ ಮೊದಲು ಈತ ಡೆತ್ ನೋಟ್ ಬರೆದಿಟ್ಟಿದ್ದ ಎನ್ನಲಾಗಿದ್ದು ಆ ಬಗ್ಗೆ ಬಹಿರಂಗಗೊಂಡಿಲ್ಲ. ಈ ಬಗ್ಗೆ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.