ಬೆಂಗಳೂರು: ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುವ ಕೃತ್ಯವೊಂದು ನಡೆದಿದ್ದು, ರಾಜ್ಯದಾದ್ಯಂತ ಈ ಕೃತ್ಯಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಭಾನುವಾರ ಇಲ್ಲಿನ ರಸ್ತೆ ಬದಿಯಲ್ಲಿ ಮೇಯುತ್ತಿದ್ದ 3 ಹಸುಗಳ ಕೆಚ್ಚಲನ್ನು ಕೊಯ್ದು ಆರೋಪಿಗಳು ಪರಾರಿಯಾಗಿದ್ದರು.
ಈ ನಡುವೆ ಸ್ಥಳಕ್ಕಾಗಮಿಸಿದ ಬಿಜೆಪಿ ನಾಯಕ ಆರ್.ಅಶೋಕ್ ಅವರ ಖಡಕ್ ಎಚ್ಚರಿಕೆಯ ಬಳಿಕ ಪೊಲೀಸ್ ಇಲಾಖೆ ಆರೋಪಿಗಳ ಹೆಡೆಮುರಿ ಕಟ್ಟಿದೆ.ಈ ಬಗೆಗಿನ ವರದಿ ಇಲ್ಲಿದೆ.
ಆರ್.ಅಶೋಕ್ ಖಡಕ್ ಎಚ್ಚರಿಕೆ!
ಭಾನುವಾರ ನಡೆದ ಈ ಅಮಾನವೀಯ ಕೃತ್ಯಕ್ಕೆ ವ್ಯಾಪಕ ಖಂಡನೆ ವ್ಯಕ್ತವಾದಾಗ ಸ್ಥಳಕ್ಕಾಗಮಿಸಿದ ಬಿಜೆಪಿ ಮುಖಂಡ ಆರ್.ಅಶೋಕ್, 'ಕಾಂಗ್ರೆಸ್ ಸರ್ಕಾರದಿಂದಾಗಿ ರಾಜ್ಯದಲ್ಲಿ ಮೂಕ ಪ್ರಾಣಿಗಳಿಗೂ ಬದುಕಲು ಆಗುತ್ತಿಲ್ಲ.
ತಕ್ಷಣ ಈ ಪ್ರಕರಣದ ಆರೋಪಿಗಳನ್ನು ಬಂಧಿಸದೇ ಹೋದರೆ ರಾಜ್ಯದಾದ್ಯಂತ ಉಗ್ರ ಹೋರಾಟ ನಡೆಸುತ್ತೇವೆ' ಎಂದಿದ್ದರು. ಅಂತಿಮಾವಗಿ ಇದೀಗ ಆರೋಪಿಗಳನ್ನು ಬಂಧಿಸಿ ಎಪ್.ಐ.ಆರ್ ದಾಖಲಿಸಲಾಗಿದೆ.
ಹಸುಗಳಿಗೆ ಚಿಕಿತ್ಸೆ!
ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ಮಲಗಿದ್ದ 3 ಹಸುಗಳ ಕೆಚ್ಚಲನ್ನು ಬೈಕ್‌ನಲ್ಲಿ ಬಂದ ಆರೋಪಿಗಳು ಕೊಯ್ದು ಆ ಬಳಿಕ ಪರಾರಿಯಾಗಿದ್ದರು.ಸದ್ಯ, ಆರೋಪಿಗಳ ಬಂಧನವಾಗಿದ್ದು, ಹಸುಗಳಿಗೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ ಎನ್ನಲಾಗಿದೆ. ಆದರೆ ಈ ಪ್ರಕರಣದಲ್ಲಿ ಪೊಲೀಸ್ ಇಲಾಖೆ ಆರೋಪಿಗಳ ಹೆಸರನ್ನು ಬಹಿರಂಗ ಪಡಿಸಿಲ್ಲ.