ಉಪ್ಪಿನಂಗಡಿ: ದ.ಕ ಜಿಲ್ಲೆಯಲ್ಲಿ ಅಕ್ರಮ ಗೋಸಾಗಾಟ, ಅಕ್ರಮ ಮರಳುಗಾರಿಕೆ, ಗಾಂಜಾ ಸಾಗಾಟ ಮುಂತಾದ ಕಾನೂನು ಉಲ್ಲಂಘಿತ ವ್ಯವಹಾರಗಳು ನಡೆಯುತ್ತಲೇ ಇರುತ್ತದೆ.
ಇದಕ್ಕೆ ಕಡಿವಾಣ ಹಾಕಲು ಪೊಲೀಸರು ಎಷ್ಟೇ ಪ್ರಯತ್ನಿಸಿದರೂ ಕೂಡಾ ಅಲ್ಲಿಲ್ಲಿ ಇಂತಹ ಅಕ್ರಮ ವಹಿವಾಟುಗಳು ನಡೆಯುತ್ತಲೇ ಇರುತ್ತದೆ. ಇದೀಗ ಉಪ್ಪಿನಂಗಡಿಯಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ರಿಕ್ಷಾದಲ್ಲಿ ಸಾಗಿಸುತ್ತಿದ್ದ ಒಂದೂವರೆ ಕೆಜಿ ಗಾಂಜಾ ಪತ್ತೆ ಹಚ್ಚಿದ ಪೊಲೀಸರು..!
ಒಂದೂವರೆ ಕೆಜಿ ಗಾಂಜಾವನ್ನು ವ್ಯಕ್ತಿಯೋರ್ವ ರಿಕ್ಷಾದಲ್ಲಿ ಸಾಗಿಸುತ್ತಿದ್ದಾಗ ಪೊಲೀಸರ ಕೈಯ್ಯಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಘಟನೆ ನಿನ್ನೆ ಉಪ್ಪಿನಂಗಡಿಯಲ್ಲಿ ನಡೆದಿದೆ.
ಮಾಲು ಸಹಿತ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿಯ ಪುತ್ತಿಲ ಗ್ರಾಮದ ಅಬ್ದುಲ್ ಸಲೀಂ ಆರೋಪಿ ರಿಕ್ಷಾ ಚಾಲಕನಾಗಿದ್ದಾನೆ. ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾಗ ಗಾಂಜಾ ಸಾಗಿಸುತ್ತಿದ್ದದ್ದು ತಿಳಿದುಬಂದಿದೆ.
ಅಕ್ರಮ ಗಾಂಜಾ ಸಾಗಾಟ ಪತ್ತೆ ಹಚ್ಚಿದ ಎಸ್ಐ ಅವಿನಾಶ್ ಮತ್ತು ತಂಡ...!
ಮೂವತ್ತನಾಲ್ಕನೇ ನೆಕ್ಕಿಲಾಡಿಯಲ್ಲಿ ಎಸ್ಐ ಅವಿನಾಶ್ ಮತ್ತವರ ತಂಡ ವಾಹನ ತಪಾಸಣೆ ಮಾಡುತ್ತಿದ್ದಾಗ ಬಂಟ್ವಾಳ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ರಿಕ್ಷಾವನ್ನು ಪೊಲೀಸರು ನಿಲ್ಲಿಸಲು ಸೂಚಿಸಿದ್ದಾರೆ.
ಆದರೆ ಚಾಲಕ ರಿಕ್ಷಾ ಸ್ಟಾಪ್ ಮಾಡದೆ ಮುಂದಕ್ಕೆ ಚಲಾಯಿಸಿ ರಿಕ್ಷಾದಿಂದ ಇಳಿದು ಎಸ್ಕೇಪ್ ಆಗಲು ಯತ್ನಿಸಿದ್ದಾನೆ. ಈ ವೇಳೆ ಪೊಲೀಸರು ಈತನನ್ನು ಹಿಡಿದು ವಿಚಾರಣೆ ನಡೆಸಿದಾಗ ನೌಶಾದ್ ಎಂಬಾತ ತನಗೆ ಗಾಂಜಾ ನೀಡಿದ್ದಾಗಿ ಬಾಯಿಬಿಟ್ಟಿದ್ದಾನೆ.