ಉತ್ತರ ಪ್ರದೇಶ: ಮಹಾ ಕುಂಭವು ಪ್ರತಿ 144 ವರ್ಷಗಳ ನಂತರ ನಡೆಯುವ ಮಹತ್ವದ ಹಿಂದೂ ಕಾರ್ಯಕ್ರಮವಾಗಿದೆ. ಸಹಸ್ರಾರು ಸಂಖ್ಯೆಯಲ್ಲಿ ಹಿಂದೂಗಳು ಸೇರುವ ಪವಿತ್ರ ಕಾರ್ಯಕ್ರಮ ಇದಾಗಿದ್ದು ಈ ಬಾರಿ ಜನವರಿ 13 ರಿಂದ ಫೆಬ್ರವರಿ 26 ರವರೆಗೆ ಭಾರತದ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿರುವ ತ್ರಿವೇಣಿ ಸಂಗಮದಲ್ಲಿ ನಡೆಯುತ್ತಿದೆ. ಇದೀಗ ಅಲ್ಲಿ ಅಗ್ನಿ ದುರಂತವೊಂದು ಸಂಭವಿಸಿದೆ.
ಎರಡು ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ ಅವಘಡ...!
ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದ ವಿಭಾಗ ಹತ್ತೊಂಬತ್ತರಲ್ಲಿ ಎರಡು ಸಿಲಿಂಡರ್ ಗಳು ಸ್ಫೋಟಗೊಂಡು ಭಾರೀ ಬೆಂಕಿ ದುರಂತ ಸಂಭವಿಸಿದೆ. ಕೂಡಲೇ ಅಗ್ನಿಶಾಮಕ ದಳದವರು, ಪೊಲೀಸರು ಕಾರ್ಯಾಚರಣೆ ನಡೆಸಿ ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹತ್ತು ಟೆಂಟ್ ಗಳಿಗೆ ವ್ಯಾಪಿಸಿದ್ದ ಬೆಂಕಿ....!!!
ಮಹಾಕುಂಭಮೇಳ ವಿಭಾಗ ಹತ್ತೊಂಭತ್ತರ ಗೀತಾ ಪ್ರೆಸ್ ಟೆಂಟ್ ನಲ್ಲಿ ಸಂಜೆ 4:30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು ಸಮೀಪದ ಹತ್ತು ಟೆಂಟ್ ಗಳಿಗೂ ಬೆಂಕಿ ಆವರಿಸಿಕೊಂಡಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಹಾನಿಯಾಗಿದೆ. ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪ್ರಯಾಗ್ ರಾಜ್ ಜಿಲ್ಲಾಧಿಕಾರಿ ರವೀಂದ್ರ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.