ಶ್ರೀ ರಂಗಪಟ್ಟಣ: ಇತ್ತೀಚೆಗಷ್ಟೇ ವಕ್ಫ್ ಬೋರ್ಡ್ ವಿರುದ್ಧ ಬಿಜೆಪಿ ಕಾರ್ಯಕರ್ತರು, ಹಿಂದೂ ಸಂಘಟನೆಗಳು ಆಕ್ರೋಶವನ್ನು ವ್ಯಕ್ತಪಡಿಸಿತ್ತು. ರೈತರ ಜಮೀನನ್ನು ವಕ್ಫ್ ಬೋರ್ಡ್ ಕಬಳಿಸಿ ಅವರ ಹೊಟ್ಟೆಗೆ ಹೊಡೆಯುವ ಕೆಲಸ ನಿರಂತರವಾಗಿ ನಡೆಯುತ್ತಿದೆ. ಈ ಹಿನ್ನೆಲೆ ಇದೀಗ ಮತ್ತೆ ಅನ್ನದಾತರ ಆಕ್ರೋಶ ಹೆಚ್ಚಾಗಿದೆ.
ಶ್ರೀರಂಗಪಟ್ಟಣ ಸ್ವಯಂಪ್ರೇರಿತ ಬಂದ್ ಗೆ ಕರೆ...!!
ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ವಕ್ಫ್ ಬೋರ್ಡ್ ಸಕ್ಕರೆ ನಾಡಾದ ಮಂಡ್ಯ ಜನರನ್ನು ಪ್ರತೀ ದಿನ ಸತಾಯಿಸುತ್ತಿದೆ. ರೈತರ ಜಮೀನು, ಪುರಾತತ್ವ ಇಲಾಖೆಯ ಆಸ್ತಿಗಳ ಆರ್‌ಟಿಸಿಯಲ್ಲಿ ವಕ್ಫ್ ಬೋರ್ಡ್ ಹೆಸರು ಎಂದು ನಮೂದಾಗಿದ್ದು, ಇದು ಅನ್ನದಾತರ ಆಕ್ರೋಶಕ್ಕೆ ಕಾರಣವಾಗಿದೆ. ಈ ಅನ್ಯಾಯವನ್ನು ವಿರೋಧಿಸಿ ರೈತರು ಮತ್ತು ಹಿಂದೂ ಸಂಘಟನೆಗಳು ಬೃಹತ್ ಹೋರಾಟಕ್ಕೆ ಸಜ್ಜಾಗಿದ್ದಾರೆ.
ಈ ಹಿನ್ನೆಲೆ ಇಂದು ಶ್ರೀರಂಗಪಟ್ಟಣ ಸ್ವಯಂ ಪ್ರೇರಿತ ಬಂದ್ ಗೆ ಕರೆ ನೀಡಲಾಗಿದೆ. ಶ್ರೀರಂಗಪಟ್ಟಣ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ವಕ್ಫ್ ಬೋರ್ಡ್ ಆತಂಕವನ್ನೇ ಸೃಷ್ಟಿ ಮಾಡಿದೆ. ಕಿರಂಗೂರು, ಶೆಟ್ಟಿಹಳ್ಳಿ, ಬಾಬುರಾಯನಕೊಪ್ಪಲು, ದರಸಕುಪ್ಪೆ ಗ್ರಾಮದ 50ಕ್ಕೂ ಹೆಚ್ಚು ರೈತರ ಆರ್‌ಟಿಸಿಯಲ್ಲಿ ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಎಂದು ನಮೂದು ಆಗಿದ್ದು ರೈತರು ಇದರಿಂದ ನಮಗೆ ವಂಚನೆ ಆಗಿದೆ. ಶೀಘ್ರವಾಗಿ ಇದು ಪರಿಹಾರವಾಗಲೇಬೇಕು ಎಂದು ರೊಚ್ಚಿಗೆದ್ದಿದ್ದಾರೆ.
ರೈತರ ಜಮೀನಿಗೆ ಎಂಟ್ರಿ ಕೊಟ್ಟ ವಕ್ಫ್ ಭೂತ...!!
ಆರ್‌ಟಿಸಿಯಲ್ಲಿ ಸ್ವಾಧೀನದಾರರ ಕಲಂ ನಲ್ಲಿ ರೈತರ ಹೆಸರಿದ್ದರೂ ಋಣ ಕಲಂ ನಲ್ಲಿ ವಕ್ಫ್ ಹೆಸರು ನಮೂದಾಗಿರುವುದು ಆತಂಕಕ್ಕೆ ಮತ್ತು ಆಶ್ಚರ್ಯಕ್ಕೆ ಕಾರಣವಾಗಿದೆ. ಸಾಮನ್ಯವಾಗಿ ಜಮೀನನ ಮೇಲೆ ಸಾಲ ತೆಗೆದುಕೊಂಡರೆ, ಕ್ರಯ ಮಾಡಿಸಿದರೆ ಮಾತ್ರ ಋಣ ಕಲಂ ನಲ್ಲಿ ಬ್ಯಾಂಕ್ ಅಥವಾ ವ್ಯಕ್ತಿಯ ಹೆಸರು ಉಲ್ಲೇಖವಾಗುತ್ತದೆ.
ಆದರೆ ಬಹುತೇಕ ರೈತರ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ಎಂಟ್ರಿ ಆಗಿದೆ. ರೈತರು ಜಮೀನು ಮಾರಾಟ, ಜಮೀನು ಹಂಚಿಕೆ ಮಾಡಿಕೊಳ್ಳುವ ಸಲುವಾಗಿ ಆರ್‌ಟಿಸಿ ಪರಿಶೀಲನೆ ಮಾಡಿದಾಗ ಇವರ ಭೂ ಕಬಳಿಕೆಗೂ ವಕ್ಫ್ ಭೂತ ಎಂಟ್ರಿ ಕೊಟ್ಟಿರುವುದು ಬೆಳಕಿಗೆ ಬಂದಿದೆ. ರೈತರ ಜಮೀನು ಮಾತ್ರವಲ್ಲದೆ ಪಾರಂಪರಿಕ ಕಟ್ಟಡಗಳ ಮೇಲೂ ವಕ್ಫ್ ನ ಹದ್ದಿನ ಕಣ್ಣು ಬಿದ್ದಿದೆ. ಇವರ ಗೋಲ್ಮಾಲ್ ನ್ನು ಖಂಡಿಸಿ ಹಿಂದೂ ಸಂಘಟನೆಗಳು ಬೃಹತ್ ಪ್ರತಿಭಟನೆಯನ್ನು ಕೈಗೆತ್ತಿಕೊಂಡಿದೆ.