ಕೊಲ್ಕತ್ತಾ: ಕೋಲ್ಕತ್ತಾದ ಆರ್ ಜಿಕರ್ ಆಸ್ಪತ್ರೆಯಲ್ಲಿ ನಡೆದಿದ್ದ ವೈದ್ಯೆಯ ಅತ್ಯಾಚಾರ ಕೊಲೆ ಪ್ರಕರಣ ದೇಶವನ್ನೇ ದಿಗ್ಭ್ರಮೆಗೊಳಿಸಿತ್ತು. ಹದಿನೆಂಟು ಗಂಟೆಗಳ ಕಾಲ ನಿರಂತರವಾಗಿ ಕೆಲಸ ಮಾಡಿದ್ದ ವೈದ್ಯೆ ದಾರುಣವಾಗಿ ಅತ್ಯಾಚಾರವಾಗಿ ಕೊಲೆಯಾಗಿದ್ದು ದೇಶದಲ್ಲೇ ಹೊಸ ಸಂಚಲನವನ್ನು ಮೂಡಿಸಿತ್ತು. ಈ ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ದೇಶದೆಲ್ಲೆಡೆ ಪ್ರತಿಭಟನೆಗಳು ನಡೆದಿದ್ದವು. ಇದೀಗ ಈ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ.
ಸೆಮಿನಾರ್ ಹಾಲ್ ನಲ್ಲಿ ಪತ್ತೆಯಾಗಿದ್ದ ವೈದ್ಯೆ ಮೃತದೇಹ, ತಿಂದು ಮುಗಿಸಿದ್ದ ಪಾಪಿ ಕಾಮುಕ..!!
ಪಶ್ಚಿಮ ಬಂಗಾಳ ಸರ್ಕಾರದ ಅಧೀನದಲ್ಲಿರುವ ಕೋಲ್ಕತ್ತಾದ ಆರ್ ಜಿಕಾರ್ ವೈದ್ಯಕೀಯ ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ವೈದ್ಯೆಯ ಮೃತದೇಹ ಪತ್ತೆಯಾಗಿತ್ತು. ಪ್ರಕರಣ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಆರೋಪಿ ಸಂಜಯ್ ರಾಯ್ ನನ್ನು ಅರೆಸ್ಟ್ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಆರೋಪ ಪಟ್ಟಿ ಸಲ್ಲಿಸಿತ್ತು. ಇದರಲ್ಲಿ ಸಾಮೂಹಿಕ ಅತ್ಯಾಚಾರದ ಸಾಧ್ಯತೆಯನ್ನು ತಳ್ಳಿ ಹಾಕಲಾಗಿತ್ತು.
ಸಂಜಯ್ ರಾಯ್ ನನ್ನು ಅಪರಾಧಿ ಎಂದು ದೂಷಿಸಿದ ನ್ಯಾಯಾಲಯ...!!
ತನ್ನ ಮೇಲಿನ ಆರೋಪವನ್ನು ಕಾಮುಕ ಸಂಜಯ್ ರಾಯ್ ತಳ್ಳಿ ಹಾಕಿದ್ದಾನೆ. ಆದರೆ ಆರೋಪ, ಈತನ ಹೇಳಿಕರ ಮತ್ತು ಸಾಕ್ಷಿಗಳ ಆಧಾರದಲ್ಲಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಈತನನ್ನೇ ದೋಷಿ ಎಂದು ತೀರ್ಪು ನೀಡಿತ್ತು. ನಿನ್ನೆ ಮತ್ತೆ ಸಂಜಯ್ ರಾಯ್ ಹೇಳಿಕೆಯನ್ನು ಆಲಿಸಿದ ನ್ಯಾಯಾಲಯ ಈತನಿಗೆ ಜೀವಾವಧಿ ಶಿಕ್ಷೆ ಆದೇಶಿಸಿ ತೀರ್ಪು ನೀಡಿದೆ.